'ಕೈ' ಟಿಕೆಟ್ ಕಸರತ್ತು: ಮಹಿಳಾ ಕಾರ್ಯಕರ್ತರಿಂದ ದೆಹಲಿಯಲ್ಲಿ ಪ್ರತಿಭಟನೆ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶೇ.10ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಮಹಿಳಾ ..
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಶೇ.10ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನಿವಾಸದೆದುರು ರಾಜ್ಯದ ಕಾಂಗ್ರೆಸ್ ನಾಯಕಿಯರು ಪ್ರತಿಭಟನೆ ನಡೆಸುತ್ತಿದ್ದು, ಈ ಸಂಬಂಧ ತಮ್ಮ ನಾಯಕಿ ಸೋನಿಯಾ ಅವರನ್ನು ಭೇಟಿ ಮಾಡುವವರೆಗೆ ತಾವು ಇಲ್ಲಿಂದ ಕದಲುವುದಿಲ್ಲ ಎಂದು ಪ್ರತಿಭಟನಾ ನಿರತ ಕಾರ್ಯಕರ್ತೆಯರು ಹೇಳಿದ್ದಾರೆ.
ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಮಲ್ಲಾಜಮ್ಮ, ರಾಜ್ಯದಲ್ಲಿ ಶೇ.33ರಷ್ಟು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕಾಗಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಕನಿಷ್ಟ ಪಕ್ಷ ಶೇ. 10ರಷ್ಟಾದರೂ ಟಿಕೆಟ್ ನೀಡಬೇಕು ಎಂದು ನಾವು ಒತ್ತಾಯಿಸುತ್ತಿದ್ದೇನೆ. ಅಲ್ಲದೆ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಸಂಬಂಧ ರಾಜ್ಯದ ನಾಯಕರು ಸೋನಿಯಾ ಗಾಂಧಿ ಅವರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಮಲ್ಲಾಜಮ್ಮ ಆರೋಪಿಸಿದರು.
ವನಜಾಕ್ಷಿ ಪಾಟೀಲ್, ಜಲಜಾ ನಾಯಕ್, ವಾಸಂತಿ ಶಿವಣ್ಣ, ಸುಮಾ ವಸಂತ್ ಸೇರಿದಂತೆ ಕಾಂಗ್ರೆಸ್‌ನ ಹಲವು ಮಹಿಳಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.