ಮೋದಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿ: ರಾಮ್ದೇವ್
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪರ ಬ್ಯಾಟ್ ಮಾಡಿರುವ ಯೋಗ ಗುರು ಬಾಬಾ ರಾಮ್ದೇವ್ ಅವರು, ಮುಂದಿನ..
ಜೈಪುರ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪರ ಬ್ಯಾಟ್ ಮಾಡಿರುವ ಯೋಗ ಗುರು ಬಾಬಾ ರಾಮ್ದೇವ್ ಅವರು, ಮುಂದಿನ ಲೋಕಸಭಾ ಚುನಾವಣೆ ವೇಳೆ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಬೇಕು ಎಂದು ಭಾನುವಾರ ಹೇಳಿದ್ದಾರೆ.
ಜನ ವಿರೋಧಿ ನೀತಿಗಳಿಂದಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಆದರೆ ಬಿಜೆಪಿ ತನ್ನ ಆದ್ಯತೆಗಳಲ್ಲಿ ಬದಲಾವಣೆ ತಂದಿದ್ದೇಯಾದರೆ ಅಧಿಕಾರಕ್ಕೆ ಬರಲಿದೆ ಎಂದು ರಾಮ್ದೇವ್ ತಿಳಿಸಿದ್ದಾರೆ.
ಬಿಜೆಪಿ ಕೆಲವು ಪ್ರಮುಖ ಬದಲಾವಣೆಗಳನ್ನು ತಂದಿದ್ದೆಯಾದರೆ ಮತ್ತು ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿದ್ದೆಯಾದರೆ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ ಎಂದು ರಾಮ್ದೇವ್ ಹೇಳಿದ್ದಾರೆ.