ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ
ನೋಯ್ಡಾ: 16 ವರ್ಷದ ಯುವತಿಯನ್ನು ಅಪಹರಿಸಿ ತನ್ನ ಕಾರಿನಲ್ಲಿ ಅತ್ಯಾಚಾರ ಎಸಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಈ ಸಂಬಂಧ ಅರೋಪಿ ರಾಹುಲ್ ಸೋನಾಕ್ಷಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ರಾಹುಲ್ ಸೋನಾಕ್ಷಿ ಎಂಬಾತ ಕಳೆದ ರಾತ್ರಿ ತನ್ನನ್ನು ಕಾರಿನಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಯುವತಿ, ಶೂ ಆಫ್ ಸೇಕ್ಟರ್ನ ಪೊಲೀಸರಿಗೆ ದೂರು ನೀಡಿದ್ದಾಳೆ.
ಅತ್ಯಾಚಾರಕ್ಕೆ ಬಲಿಯಾದ ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಓಂ ಪ್ರಕಾಶ್ಯಾದವ ಹೇಳಿದ್ದಾರೆ.