ಪ್ರತಿಪಕ್ಷದ ನಾಯಕ ಸಿದ್ದು ಅಸ್ವಸ್ಥ, ವೈದ್ಯರಿಂದ ಚಿಕಿತ್ಸೆ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ಅಸ್ವಸ್ಥರಾಗಿದ್ದು, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸಿದ್ದು ಅವರು ತಮ್ಮ ನಿವಾಸದಲ್ಲೇ ..
ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ಅಸ್ವಸ್ಥರಾಗಿದ್ದು, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸಿದ್ದು ಅವರು ತಮ್ಮ ನಿವಾಸದಲ್ಲೇ ವೈದ್ಯರಿಂದ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಕಳೆದ ಒಂದು ವಾರದಿಂದ ದೆಹಲಿಯಲ್ಲಿದ್ದ ಸಿದ್ದರಾಮಯ್ಯ ಅವರು ನಿನ್ನೆ ತಡ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದರು. ಇಂದು ಬೆಳಗ್ಗೆ ಇದ್ದಕ್ಕಿದ್ದ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ ಕೆಸಿ ಜನರಲ್ ಆಸ್ಪತ್ರೆಯ ವೈದ್ಯ ರವಿ ಕುಮಾರ್ ಅವರು ಸಿದ್ದು ಅವರ ಆರೋಗ್ಯ ಪರೀಕ್ಷಿಸಿದರು.
ತಪಾಸಣೆ ಬಳಿಕ ಮಾತನಾಡಿದ ರವಿ ಕುಮಾರ್ ಅವರು, ಇಸಿಜಿ ಸೇರಿದಂತೆ ಎಲ್ಲವನ್ನೂ ಪರೀಕ್ಷಿಸಲಾಗಿದ್ದು, ಅವರು ತುಂಬಾ ನಾರ್ಮಲ್ ಆಗಿದ್ದಾರೆ. ಕಳೆದ ಮೂರು ನಾಲ್ಕು ದಿನಗಳಿಂದ ಸರಿಯಾಗಿ ನಿದ್ದೆ ಮಾಡದ ಹಿನ್ನೆಲೆಯಲ್ಲಿ ಅವರಿಗೆ ಗ್ಯಾಸ್ಟ್ರಿಕ್ ಸಮಸ್ಯೆಯಾಗಿದೆ. ಹೀಗಾಗಿ ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದರು. ಅಲ್ಲದೆ ಒಂದು ದಿನ ವಿಶ್ರಾಂತಿ ಪಡೆಯುವಂತೆ ಅವರಿಗೆ ಸೂಚಿಸಿರುವುದಾಗಿ ತಿಳಿಸಿದರು.