ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಎಸ್‌ಪಿ ಮುಖಂಡ ಹತ್ಯೆ ಪ್ರಕರಣ: ಇಬ್ಬರ ಬಂಧನ

ಬಹಜನ ಸಮಾಜ ಪಕ್ಷದ ಮುಖಂಡ ಮತ್ತು ಉದ್ಯಮಿ ದೀಪಕ್ ಭಾರದ್ವಾಜ್ ಅವರ ಹತ್ಯೆ ಪಕ್ರರಣಕ್ಕೆ ಸಂಬಂಧಿಸಿದಂತೆ ದೆಹಲಿ...

Mainashree
Updated On : 1 Apr 2013, 3:09 am

ನವದೆಹಲಿ: ಬಹಜನ ಸಮಾಜ ಪಕ್ಷದ ಮುಖಂಡ ಮತ್ತು ಉದ್ಯಮಿ ದೀಪಕ್ ಭಾರದ್ವಾಜ್ ಅವರ ಹತ್ಯೆ ಪಕ್ರರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಬಹುಜನ ಸಮಾಜ ಪಕ್ಷದ ನಾಯಕ ದೀಪಕ್ ಭಾರದ್ವಜ್ ಕೊಲೆ ಒಂದು ಪಿತೂರಿ ಎಂದು ಪೊಲೀಸ್ ಮೂಲಗಳು ತಿಳಿಸಿತ್ತು. ಈ ಸಂಬಂಧ ತನಿಖೆ ಚುರುಕುಗೊಳಿಸಿರುವ ಪೊಲೀಸರು ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಇಬ್ಬರು ಆರೋಪಿಗಳನ್ನಾ ಬಂಧಿಸಿದ್ದಾರೆ.

ಪುರುಶೋತ್ತಮ್ ರಾಣ ಮತ್ತು ಸುನಿಲ್ ಮನ್ ಎಂಬುವವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ರವೀಂದ್ರ ಯಾದವ್ ತಿಳಿಸಿದ್ದಾರೆ.

ಆಸ್ತಿ ಮತ್ತು ಹಣಕ್ಕೆ ಸಂಬಂಧಿಸಿದಂತೆ ದೀಪಕ್ ಅವರನ್ನು ಸುಪಾರಿ ನೀಡಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪಕ್ ಪತ್ನಿ ರಮೇಶ್ ಕುಮಾರಿ ಮತ್ತು ಮಕ್ಕಳಾದ ನಿತೇಶ್, ಹಿತೇಶ್ ಅವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಧಿಕರು ಅಥವಾ ವ್ಯಾಪಾರದ ಪ್ರತಿಸ್ಪರ್ಧಿಗಳು ಸುಪಾರಿ ನೀಡಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗಂಡ-ಹೆಂಡತಿ ಮಧ್ಯೆ ಕಲಹ ಉಂಟಾಗಿ, ದೀಪಕ್ ಅವರನ್ನು ತೊರೆದು ಪತ್ನಿ ಕಳೆದ ಹಲವು ತಿಂಗಳಿನಿಂದ ಚಿಕ್ಕ ಮಗ ನಿತೀಶ್ ಎಂಬುವವರ ಮನೆಯಲ್ಲಿ ವಾಸವಿದ್ದರು. ಇದಲ್ಲದೇ ಮಗ ನಿತೀಶ್ ತಂದೆಯ ವಿರುದ್ಧ ಕೆಲವು ತಿಂಗಳ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೀಪಕ್ ಅವರು ಮಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಪತ್ನಿ ಮತ್ತು ಮಗನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಕಳೆದ ವಾರ ನಿತೇಶ್ ಕುಂಜ್ ಫಾರ್ಮ್‌ಹೌಸ್‌ನಲ್ಲಿ 62 ವರ್ಷದ ಬಿಎಸ್‌ಪಿ ನಾಯಕ ದೀಪಕ್ ಭಾರದ್ವಜ್ ಅವರನ್ನು ಅಪರಿಚಿತ ವ್ಯಕ್ತಿಗಳು ಶೂಟ್ ಮಾಡಿ ಪರಾರಿಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement