ಸ್ವಾಮಿ ವಿವೇಕಾನಂದರು ಯುವಜನತೆಗೆ ಆದರ್ಶ ವ್ಯಕ್ತಿ
ಅಹಮದಬಾದ್: ಇಂದಿನ ಯುವಜನತೆಗೆ ಸ್ವಾಮಿ ವಿವೇಕಾನಂದರೇ ಆದರ್ಶ ಪುರುಷ, ಅವರ ಚಿಂತನೆ ಮತ್ತು ಆಲೋಚನೆಗಳು ಈಗಲೂ ಪ್ರಸ್ತುತ ಎಂದು ರಾಷ್ಟ್ರೀಯ ಸ್ವಯಂ ಸೇವಕ್ ಸಂಘದ(ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಗವತ್ ಸೋಮವಾರ ಹೇಳಿದ್ದಾರೆ.
ವಿವೇಕಾನಂದರ ವಿಚಾರಧಾರೆಗಳು ಇಂದಿಗೂ ಯುವಕರಿಗೆ ಮಾದರಿಯಾಗಿವೆ. ಅವರ ವಿಚಾರಧಾರೆಗಳು ಭಾರತದ ಹಾಗೂ ವಿಶ್ವದ ಅಭಿವೃದ್ಧಿಯ ಮೇಲೆ ಬೆಳಕು ಚೆಲ್ಲುತ್ತವೆ ಎಂದು ಅವರು ತಿಳಿಸಿದ್ದಾರೆ.
ಭಾರತೀಯ ವಿಚಾರ ಮಾರ್ಚ್ವತಿಯಿಂದ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಎರಡು ದಿನಗಳ ವಿಚಾರಣಸಂಕಿರಣದಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಚಿಂತನೆಗಳು ಮುಂದಿನ ಪೀಳಿಗೆಯಲ್ಲೂ ಬಿತ್ತಬೇಕು. ಇದು ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.