ಮಾಜಿ ಸಚಿವ ಕೃಷ್ಣಪ್ಪ ಮನೆ ಮೇಲೆ ದಾಳಿ, 2.20 ಕೋಟಿ ವಶ
ಮಾಜಿ ಸಚಿವ ಎ.ಕೃಷ್ಣಪ್ಪ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು..
ಬೆಂಗಳೂರು: ಮಾಜಿ ಸಚಿವ ಎ.ಕೃಷ್ಣಪ್ಪ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, ದಾಳಿ ವೇಳೆ ಮನೆಯಲ್ಲಿ ದಾಖಲೆ ಇಲ್ಲದ 2 ಕೋಟಿ 20 ಲಕ್ಷ ರುಪಾಯಿ ನಗದು ಪತ್ತೆಯಾಗಿದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಕೃಷ್ಣಪ್ಪ ಅವರ ಬೆಂಗಳೂರಿನ ಕೆ.ಆರ್.ಪುರಂ ನಿವಾಸದ ಮೇಲೆ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿ ಕ್ಯಾಪ್ಟನ್ ಪ್ರದೀಪ್ ಆರ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಸೂಕ್ತ ದಾಖಲೆಗಳಿಲ್ಲದೇ ಅಕ್ರಮವಾಗಿ ಸಂಗ್ರಹಿಸಿದ್ದ 2 ಕೋಟಿ 20 ಲಕ್ಷ ರುಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಕೃಷ್ಣಪ್ಪ ಅವರ ವವಿರುದ್ಧ ತೆರಿಗೆ ವಂಚನೆ ಆರೋಪ ಪ್ರಕರಣ ದಾಖಲಿಸಿಕೊಂಡಿದ್ದು, ಕೃಷ್ಣಪ್ಪ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.
ಇನ್ನು ಹಿರಿಯೂರಿನಲ್ಲೂ ಕೃಷ್ಣಪ್ಪ ಅವರ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.