ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗೆದ್ದಿದೆ: ಸೋನಿಯಾ
ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗೆದ್ದಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ..
ಗುಲ್ಬರ್ಗಾ: ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗೆದ್ದಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಹೇಳಿದ್ದಾರೆ.
ಬಿಸಿಲ ನಾಡು ಗುಲ್ಬರ್ಗಾದಲ್ಲಿ ಚುನಾವಣಾ ಪ್ರಚಾರ ಬಿರುಸುಗೊಂಡಿದ್ದು, ನಗರದ ಎನ್ವಿ ಕಾಲೇಜ್ ಮೈದಾನದಲ್ಲಿ ಎರಡನೇ ಸುತ್ತಿನ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ, ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಇದೇ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸೋನಿಯಾ, ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 98 ಸಾವಿರ ಕೋಟಿ ರುಪಾಯಿ ಅನುದಾನ ನೀಡಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಮಾತ್ರ ಕೇಂದ್ರದ ಅನುದಾನವನ್ನು ಸರಿಯಾಗಿ ಬಳಸಿಕೊಂಡಿಲ್ಲ ಎಂದು ಆರೋಪಿಸಿದರು. ಅಲ್ಲದೆ ಜನರ ಉದ್ಧಾರವೇ ಕಾಂಗ್ರೆಸ್ನ ಮುಖ್ಯ ಧ್ಯೇಯವಾಗಿದೆ ಎಂದರು.
ಈ ಸಮಾವೇಶದಲ್ಲಿ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ, ಸಂಸದ ಎನ್.ಧರಂ ಸಿಂಗ್ ಅವರು ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.