ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡ ಮನೆ ದಾಳಿ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡ ಅವರ ಮನೆ ಮೇಲೆ ಚುನಾವಣಾಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದಾರೆ.
ಅಕ್ರಮ ಹಣ ಇರುವ ಬಗ್ಗೆ ಮಾಹಿತಿ ಹಿನ್ನೆಲೆ ಜಿ.ಟಿ. ದೇವೇಗೌಡ ಅವರ ಮೈಸೂರಿನ ವಿಜಯನಗರದ ನಿವಾಸದ ಮೇಲೆ ಚುನಾವಣಾಧಿಕಾರಿಗಳು ಹಾಗು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಜಿ.ಟಿ. ದೇವೇಗೌಡ ಅವರು ಮೇ 5ರ ಚುನಾವಣೆ ಸಂಬಂಧ ಮತದಾರರಿಗೆ ಹಣ ಹಂಚಲು ಅಕ್ರಮ ಹಣ ಸಂಗ್ರಹಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ದೊರೆತಿದ್ದರಿಂದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.