ಹಾಲಕೆರೆ ಗ್ರಾಮಸ್ಥರಿಂದ ತಹಶೀಲ್ದಾರ್ಗೆ ದಿಗ್ಬಂದನ
ಗದಗ: ಮತದಾರ ಪಟ್ಟಿಯಲ್ಲಿ ಹೆಸರು ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಹಾಲಕೆರೆ ಗ್ರಾಮದ ತಹಶೀಲ್ದಾರ್ ಅವರನ್ನು ಗ್ರಾಮಸ್ಥರು ಕೂಡಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ರೋಣ ತಾಲ್ಲೂಕಿನ ಹಾಲಕೆರೆ ಗ್ರಾಮದಲ್ಲಿ ಮತದಾರರ ಪಟ್ಟಿಯಲ್ಲಿ 400ಕ್ಕೂ ಹೆಚ್ಚು ಗ್ರಾಮಸ್ಥರ ಹೆಸರು ಬಿಟ್ಟು ಹೋಗಿರುವುದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ತಹಶೀಲ್ದಾರ್ ಅವರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಗ್ರಾಮಸ್ಥರು ತಮಗೆ ಮತದಾನ ಮಾಡಲು ಅವಕಾಶ ನೀಡುವಂತೆ ತಹಶೀಲ್ದಾರ್ಗೆ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವುದರಿಂದ ತಮಗೆ ಮತದಾನ ಮಾಡಲು ಅವಕಾಶ ನೀಡಿ ಇಲ್ಲವಾದರೆ ಹಾಲಕೆರೆ ಗ್ರಾಮದಲ್ಲಿ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಪಟ್ಟು ಹಿಡಿದ್ದಾರೆ.