ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮತದಾನದ ಅವಧಿ 1 ಗಂಟೆ ಹೆಚ್ಚಳ, ನಾಳೆ ಬೆಳಗ್ಗೆ 7ರಿಂದ ಸಂಜೆ 6ರವರೆಗೆ

ನಾಳೆ ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವ ವಿಧಾನಸಭೆ ಚುನಾವಣೆಯ ಮತದಾನದ ಅವಧಿಯನ್ನು ಮತ್ತೆ ಒಂದು..

Lingaraj Badiger
Updated On : 4 May 2013, 5:14 am

ಬೆಂಗಳೂರು: ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯುವ ವಿಧಾನಸಭೆ ಚುನಾವಣೆಯ ಮತದಾನದ ಅವಧಿಯನ್ನು ಮತ್ತೆ ಒಂದು ಗಂಟೆಗಳ ಕಾಲ ವಿಸ್ತರಿಸಿ ಚುನಾವಣಾ ಆಯೋಗ ಶನಿವಾರ ಆದೇಶ ಹೊರಡಿಸಿದೆ. ನೂತನ ಆದೇಶದನ್ವಯ ನಾಳೆ ಒಟ್ಟು 11 ಗಂಟೆಗಳ ಕಾಲ ನಿರಂತರ ಮತದಾನ ಪ್ರಕ್ರಿಯೆ ನಡೆಯಲಿದೆ.

ಈ ಮುಂಚೆ ಚುನಾವಣಾ ಆಯೋಗ ಮತದಾನದ ಸಮಯವನ್ನು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ವರೆಗೆ ನಿಗದಿ ಮಾಡಿತ್ತು. ಆದರೆ ಇದೀಗ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯ ವರೆಗೆ ಸಮಯ ನಿಗದಿ ಮಾಡುವ ಮೂಲಕ ಮತ್ತೆ ಮತದಾನಕ್ಕೆ ಹೆಚ್ಚುವರಿಯಾಗಿ ಒಂದು ಗಂಟೆಗಳ ಸಮಯವಕಾಶ ನೀಡಿದೆ.

ನಾಳೆ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನಿಲ್ ಕುಮಾರ್ ಝಾ ಅವರು ಶನಿವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ
ಇನ್ನು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಸಂಜೆ 5 ಗಂಟೆಯವರೆಗೆ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ಹೇಳಿದ್ದಾರೆ.

ಮತದಾನ ಹಿನ್ನೆಲೆಯಲ್ಲಿ ಯಾರೂ ಗನ್, ಲಾಂಗ್ ಹಾಗೂ ಮಚ್ಚು ಸೇರಿದಂತೆ ಯಾವುದೇ ಮಾರಕಾಸ್ತ್ರ ಕೊಂಡೊಯ್ಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement