ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮತದಾನ: ಕೋಲಾರದಲ್ಲಿ ಮಚ್ಚು ಲಾಂಗುಗಳ ಪ್ರದರ್ಶನ

ಕರ್ನಾಟಕ ವಿಧಾನಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ನೆರವೇರುತ್ತಿದ್ದರೂ ಸಹ ರಾಜ್ಯದ ಹಲವೆಡೆ ಕೆಲವು ಅಹಿತಕರ ಘಟನೆಗಳು ನಡೆದಿವೆ.

Srinivasa Murthy VN
Updated On : 5 May 2013, 12:59 pm

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಬಹುತೇಕ ಶಾಂತಿಯುತವಾಗಿ ನೆರವೇರುತ್ತಿದ್ದರೂ ಸಹ ರಾಜ್ಯದ ಹಲವೆಡೆ ಕೆಲವು ಅಹಿತಕರ ಘಟನೆಗಳು ನಡೆದಿವೆ.

ಕೋಲಾರದಲ್ಲಿ ಮತದಾರರನ್ನು ಓಲೈಸಿಕೊಳ್ಳುವ ಭರದಲ್ಲಿ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಯ ಬೆಂಬಲಿಗರ ನಡವೆ ವಾಕ್ಸಮರ ಏರ್ಪಟ್ಟಿದೆ. ವಾಕ್ಸಮರ ಒಂದು ಹಂತದಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು. ಈ ವೇಳೆ ಕಾಂಗ್ರೆಸ್ ಪಕ್ಷದ ಸಗರಸಭಾ ಸದಸ್ಯ ಪ್ರಸಾದ್ ಬಾಬು ಮತ್ತು ಕುಮಾರ್ ಎಂಬುವವರು ಲಾಂಗು ಮಚ್ಚುಗಳನ್ನು ಹಿಡಿದು ಪಕ್ಷೇತರ ಅಭ್ಯರ್ಥಿ ವರ್ತೂರು ಪ್ರಕಾಶ್ ಅವರ ಬೆಂಬಲಿಗರತ್ತ ಧಾವಿಸಿದ್ದರು. ವರ್ತೂರು ಪ್ರಕಾಶ್ ಅವರ ಬೆಂಬಲಿಗರೂ ಸಹ ಲಾಂಗುಗಳನ್ನು ಹಿಡಿದು ವಿರೋಧಿಗಳಿಗೆ ಪಂಥಾಹ್ವನ ನೀಡಿದ್ದರು. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಉಭಯ ಅಭ್ಯರ್ಥಿಗಳ ಬೆಂಬಲಿಗರನ್ನು ಬಂಧಿಸಿ, ಪರಿಸ್ಥಿತಿ ತಿಳಿಗೊಳಿಸಿದರು.

ಅಲ್ಲದೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ವರಿಷ್ಠ ಬಿಪಿನ್ ಗೋಪಾಲಕೃಷ್ಣ ಅವರು, ಘಟನೆ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆ ನೀಡಿದ್ದಾರೆ.

ಅಂತೆಯೇ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿಯಲಾಗಿದ್ದು, ಮತಗಟ್ಟೆ ಬಳಿ ಮತದಾರರನ್ನು ಓಲೈಸುವ ವಿಚಾರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರು ಪರಸ್ಪರ ಘರ್ಷಣೆಗೆ ಇಳಿದಿದ್ದರು. ಈ ವೇಳೆ ಜೆಡಿಎಸ್ ಪಕ್ಷದ ಕಾರ್ಯಕರ್ತನೊಬ್ಬ ಕಾಂಗ್ರೆಸ್ ಪಕ್ಷದ ಬಾಬಾಜಾನ್ ಎಂಬ ಕಾರ್ಯಕರ್ತನಿಗೆ ಚಾಕುವಿನಿಂದ ಇರಿದಿದ್ದಾನೆ.

ಅದೇ ರೀತಿ ಸಾಗರ ತಾಲೂಕಿನ ಸೂರನಗದ್ದೆ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿದ್ದು, ಇಬ್ಬರ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement