ಮತದಾನ: ಹಾವೇರಿಯಲ್ಲಿ ಚುನಾವಣಾ ಸಿಬ್ಬಂದಿ ಸಾವು
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರಿಗೆ ಎದೆ ನೋವು ಕಾಣಿಸಿಕೊಂಡ ಪರಿಣಾಮವಾಗಿ ಅವರು ಸಾವನ್ನಪ್ಪಿದ್ದಾರೆ.
ರಾಣೆಬೆನ್ನೂರಿನ ತುಮ್ಮಿನಕಟ್ಟಿ ನಿವಾಸಿಯಾಗಿರುವ ಶಿಕ್ಷಕಿ ಲೀಲಾವತಿ ಎನ್ನುವವರು ಕರ್ತವ್ಯದಲ್ಲಿರುವಾಗಲೇ ಸಾವನ್ನಪ್ಪಿದ್ದಾರೆ. ಶಿಕ್ಷಕಿ ಲೀಲಾವತಿ ಅವರು ಹಾವೇರಿ ಜಿಲ್ಲೆಯ ನೆಗಳೂರು ಗ್ರಾಮದ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ದಾವಣೆಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು.
ಆದರೆ ಶಿಕ್ಷಕಿ ಲೀಲಾವತಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇದೀಗ ಅವರ ಮೃತದೇಹವನ್ನು ದಾವಣೆಗೆರೆ ಜಿಲ್ಲಾಸ್ಪತ್ರೆಯಲ್ಲಿಡಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಅವರ ಸಂಬಂಧಿಕರಿಗೆ ರವಾನಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.