ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿ ಬಂಧನ

Vishwanath S
Updated On : 5 May 2013, 3:02 am

ಬಳ್ಳಾರಿ: ಚುನಾವಣೆ ಸಂಬಂಧ ಮತದಾರರಿಗೆ ಹಣ ಹಂಚುತ್ತಿದ್ದ ಬಿಎಸ್‌ಆರ್ ಕಾಂಗ್ರೆಸ್‌ನ ಕಾರ್ಯಕರ್ತನನ್ನು ಬಂಧಿಸಿರುವ ಪೊಲೀಸರು ಆರೋಪಿಯಿಂದ 9.700 ರು. ನಗದನ್ನು ವಶಪಡಿಸಿಕೊಂಡಿದ್ದಾರೆ.

ಬಳ್ಳಾರಿಯ ಕೌಲ್ ಬಜಾರ್ ಬಳಿ ಬಿಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ಮತದಾರರಿಗೆ ಹಣ ಹಂಚುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿದ ಬಳ್ಳಾರಿಯ ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಕೌಲ್ ಬಜಾರ್ ಠಾಣಾ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement