ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ವಾಮೀಜಿ ಮನೆ ಮೇಲೆ ದಾಳಿ: ಅಪಾರ ಪ್ರಮಾಣದ ನಗದು ಜಪ್ತಿ

ಸ್ವಾಮೀಜಿ ಮನೆ ಮೇಲೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ನಗುದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

Srinivasa Murthy VN
Updated On : 5 May 2013, 12:30 pm

ಬೆಂಗಳೂರು: ಖ್ಯಾತ ಧಾರ್ಮಿಕ ಗುರು ಚಂದ್ರಶೇಖರ ಸ್ವಾಮೀಜಿ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಮತ್ತು ಚುನಾವಣಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ನಗುದು ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಚಂದ್ರಶೇಖರ ಸ್ವಾಮೀಜಿ ಅವರ ಬೆಂಗಳೂರಿನ ಆರ್.ಟಿ.ನಗರ ನಿವಾಸದ ಮೇಲೆ ದಾಳಿ ಮಾಡಿದ ಅಧಿಕಾರಿಗಳು, ಬರೋಬ್ಬರಿ 15 ಕೆಜಿ ಚಿನ್ನ, 50 ಕೆಜಿ ಬೆಳ್ಳಿ ಮತ್ತು ಸುಮಾರು 1 ಕೋಟಿ 10 ಲಕ್ಷ ರು.ಗಳನ್ನು ವಶಪಡಿಸಿಕೊಂಡಿದ್ದಾರೆ. ನಿನ್ನೆ ಸಂಜೆ ಸುಮಾರು 5 ಗಂಟೆಗೆ ಆರಂಭವಾದ ದಾಳಿ ಇಂದು ಬೆಳಗ್ಗೆ 6 ಗಂಟೆಯವರೆಗೂ ಮುಂದುವರೆದಿತ್ತು. ಈ ವೇಳೆ ಸ್ವಾಮೀಜಿ ಅವರ ಮೇನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದು ಪತ್ತೆಯಾಗಿದ್ದು, ಇದು ಚುನಾವಣಾ ಅಭ್ಯರ್ಥಿಗಳದ್ದೋ ಅಥವಾ ತೆರಿಗೆ ವಂಚಿಸಿ ಅಕ್ರಮವಾಗಿ ಸಂಗ್ರಹಿಸಡಲಾದ ಸಂಪತ್ತೋ ಎಂಬುದನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಇಷ್ಟು ಭಾರಿ ಪ್ರಮಾಣದ ಮೊತ್ತವನ್ನು ಸ್ವಾಮೀಜಿ ಏಕೆ ತಮ್ಮ ನಿವಾಸದಲ್ಲಿ ಇಟ್ಟುಕೊಂಡಿದ್ದರು. ಬ್ಯಾಂಕಿನಲ್ಲಿಯೋ ಅಥವಾ ಬ್ಯಾಂಕ್ ಲಾಕರ್‌ನಲ್ಲಿ ಇಡಬಹುದಾಗಿತ್ತು ಎಂಬ ಪ್ರಶ್ನೆಗಳು ಮೂಡುತಿದ್ದು, ಈ ಬಗ್ಗೆಯೂ ಕೂಡ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement