ಧೋನಿ ವಿರುದ್ಧ ದೂರು ದಾಖಲು
ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ವಿರುದ್ಧ..
ಬೆಂಗಳೂರು: ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ವಿರುದ್ಧ ಸೋಮವಾರ ಬೆಂಗಳೂರಿನ 6ನೇ ಎಸಿಎಂಎಂ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.
ವಿಷ್ಣು ಅವತಾರದಲ್ಲಿ 8 ಕೈಗಳಲ್ಲಿ ಶೂ ಹಿಡಿದು ಧೋನಿ ಜಾಹೀರಾತು ನೀಡಿದ್ದಾರೆ. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಹೀಗಾಗಿ ಅವರ ವಿರುದ್ಧ ದೂರು ದಾಖಲಿಸಿರುವುದಾಗಿ ವಕೀಲ ಧರ್ಮಪಾಲ್ ಅವರು ಹೇಳಿದ್ದಾರೆ.
ಐಪಿಸಿ ಸೆಕ್ಸೆನ್ 295ರ ಅಡಿ ಧೋನಿ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಧರ್ಮಪಾಲ್ ಅವರು ತಿಳಿಸಿದ್ದಾರೆ.