ಬಿಜೆಪಿಗೆ ಮುಖಭಂಗ: ರಾಜಿನಾಮೆಗೆ ಮುಂದಾದ ಶೆಟ್ಟರ್
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ.
ಈಗಾಗಲೇ ಸಿಎಂ ಶೆಟ್ಟರ್ ಅವರು ತಮ್ಮ ರಾಜಿನಾಮೆ ಪತ್ರದೊಂದಿಗೆ ರಾಜಭವನಕ್ಕೆ ಆಗಮಿಸುತ್ತಿರುವ ಕುರಿತು ಮಾಹಿತಿಗಳು ಲಭ್ಯವಾಗಿದ್ದು, ಇಂದು ಸಂಜೆಯೊಳಗೆ ಶೆಟ್ಟರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆ ಇದೆ.
ಹುಬ್ಬಳ್ಳಿ ಕೇಂದ್ರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ಅವರು, ತಮ್ಮ ಕ್ಷೇತ್ರಗಳಲ್ಲಿ ಎಲ್ಲ ಪಕ್ಷದ ಅಭ್ಯರ್ಥಿಗಳನ್ನು ಹಿಂದಿಕ್ಕಿದ್ದ ಶೆಟ್ಟರ್ ಅವರು ಸುಮಾರು 10 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆದರೆ ಅವರ ಪಕ್ಷ ಸೋಲು ಕಾಣುತ್ತಿರುವ ಹಿನ್ನಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ.