ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜಿನಾಮೆ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಇಂದು ಸಂಜೆ 6.30ರ ವೇಳೆಗೆ ರಾಜಭವನಕ್ಕೆ ಆಗಮಿಸಿದ ಶೆಟ್ಟರ್ ಅವರು, ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರಿಗೆ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಶೆಟ್ಟರ್ ಅವರಿಂದ ರಾಜಿನಾಮೆ ಪತ್ರ ಸ್ವೀಕರಿಸಿದ ರಾಜ್ಯಪಾಲರು, ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ತಮ್ಮ ಸ್ಥಾನದಲ್ಲಿ ಮುಂದುವರೆಯುವಂತೆ ಸೂಚಿಸಿದ್ದಾರೆ.
ರಾಜಿನಾಮೆ ಸಲ್ಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶೆಟ್ಟರ್, ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮ ಅಭಿವೃದ್ಧಿ ಕೆಲಸಗಳು ನಡೆದಿವೆ. ಫಲಿತಾಂಶ ಅನಿರೀಕ್ಷಿತವಾಗಿದ್ದು, ಕರ್ನಾಟಕ ಜನತೆಯ ತೀರ್ಪಿಗೆ ತಲೆಬಾಗುತ್ತೇವೆ. ಜನತೆಯ ಆದೇಶಕ್ಕೆ ತಲೆ ಬಾಗಿ ನಾವು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು, ಪ್ರಮಾಣಿಕವಾಗಿ ನಮ್ಮ ಕರ್ತವ್ಯ ನಿರ್ವಹಿಸುತ್ತೇವೆ ಎಂದು ಹೇಳಿದರು.