ಸಿಎಂ ಆಯ್ಕೆ: ನಾಳೆ 'ಕೈ' ಶಾಸಕಾಂಗ ಪಕ್ಷದ ಸಭೆ
ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆಯಲ್ಲಿದ್ದು, ಎಲ್ಲ 121..
ಬೆಂಗಳೂರು: ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಸಭೆ ನಡೆಯಲ್ಲಿದ್ದು, ಎಲ್ಲ 121 ಶಾಸಕರು ಹಾಜರಾಗುವಂತೆ ಸೂಚಿಸಲಾಗಿದೆ.
ಇಂದು ರಾತ್ರಿ ಕೇಂದ್ರ ಸಚಿವೆ ಅಂಬಿಕಾ ಸೋನಿ, ರಕ್ಷಣಾ ಸಚಿವ ಎಕೆ ಆಂಟನಿ ಮತ್ತು ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಧುಸೂದನ್ ಮಿಸ್ತ್ರಿ ಅವರ ನೇತೃತ್ವದ ಕೇಂದ್ರದ ವೀಕ್ಷಕರ ತಂಡ ಬೆಂಗಳೂರಿಗೆ ಆಗಮಿಸಲಿದ್ದು, ನಾಳೆ ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿರುವ ಅಭಿನಂದನಾ ಸಮಾರಂಭದಲ್ಲಿ, ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ನ ಎಲ್ಲ 121 ಶಾಸಕರಿಗೆ ಸನ್ಮಾನ ಮಾಡಲಾಗುತ್ತದೆ.
ಇದಕ್ಕಾಗಿ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ನ ಎಲ್ಲ 121 ಶಾಸಕರಿಗೆ ಸಭೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರು ಸೂಚಿಸಿದ್ದಾರೆ. ಅಂತೆಯೇ ಸಾಧ್ಯವಾದರೇ ನಾಳೆ ಸಂಜೆಯೇ ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆ ಇದ್ದು, ಮುಖ್ಯಮಂತ್ರಿ ಆಯ್ಕೆ ಕುರಿತು ಶಾಸಕರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ.
ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು, ಸಿಎಂ ಆಯ್ಕೆ ಕುರಿತು ಚರ್ಚಿಸಲು ತಾವು ದೆಹಲಿಗೆ ತೆರಳುತ್ತಿಲ್ಲ. ಸಿಎಂ ಆಯ್ಕೆಯನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಹೇಳಿದರು.