ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾವೇರಿ ಮೇಲ್ವಿಚಾರಣಾ ಸಮಿತಿ ರಚನೆ

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ಶುಕ್ರವಾರ ತಾತ್ಕಾಲಿಕ ಮೇಲ್ವಿಚಾರಣಾ ಸಮಿತಿ ರಚನೆ ಮಾಡಿದೆ.

Lingaraj Badiger
Updated On : 10 May 2013, 1:16 am

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ಶುಕ್ರವಾರ ತಾತ್ಕಾಲಿಕ ಮೇಲ್ವಿಚಾರಣಾ ಸಮಿತಿ ರಚನೆ ಮಾಡಿದೆ.

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕದ ಪರ ವಕೀಲ ನಾರಿಮನ್ ಅವರು ನೀಡಿದ ಸಲಹೆ ಒಪ್ಪಿದ ಸುಪ್ರೀಂ ಕೋರ್ಟ್, ತಾತ್ಕಾಲಿಕ ವ್ಯವಸ್ಥೆಯಾಗಿ ಮೇಲ್ವಿಚಾರಣಾ ಸಮಿತಿ ರಚಿಸಿದೆ.

ಕೇಂದ್ರ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಈ ಸಮಿತಿ ರಚಿಸಲಾಗಿದ್ದು, ಕೇಂದ್ರ ಸರ್ಕಾರ ಮುಂದಿನ ನಿರ್ಧಾರ ತೆಗೆದುಕೊಳ್ಳುವವರೆಗೂ ಈ ಸಮಿತಿ ಅಸ್ತಿತ್ವದಲ್ಲಿರಲಿದೆ. ಸುಪ್ರೀಂ ಕೋರ್ಟ್‌ನ ತಾತ್ಕಾಲಿಕ ಮೇಲ್ವಿಚಾರಣಾ ಸಮಿತಿಯಲ್ಲಿ ಕರ್ನಾಟಕ, ಕೇರಳ. ತಮಿಳುನಾಡು ಹಾಗೂ ಪಾಂಡಿಚೇರಿ ಈ ನಾಲ್ಕು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಸಮಿತಿಯ ಸದಸ್ಯರಾಗಿದ್ದಾರೆ.

ಇನ್ನು ಈ ಬಗ್ಗೆ ಯಾವುದೇ ಅನುಮಾನಗಳಿದ್ದರೆ ಸುಪ್ರೀಂ ಕೋರ್ಟ್‌ನಿಂದ ನಿರ್ದೇಶನ ಪಡೆಯಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣಾ ಸಮಿತಿಯ ರಚನೆಯಿಂದಾಗಿ ಕಾವೇರಿ ನೀರು ನಿರ್ವಹಣಾ ಹಾಗೂ ನಿಯಂತ್ರಣ ಮಂಡಳಿ ರಚನೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement