ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಧು ಕೋಡಾಗೆ 14 ದಿನ ನ್ಯಾಯಾಂಗ ಬಂಧನ

Vishwanath S
Updated On : 10 May 2013, 4:46 am

ರಾಂಚಿ: ಮೂರು ವಾರಗಳ ತಾತ್ಕಾಲಿಕ ಜಾಮೀನು ಪಡೆದಿದ್ದ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾರ ಅವಧಿ ಗುರುವಾರಕ್ಕೆ ಕೊನೆಗೊಂಡ ಹಿನ್ನೆಲೆಯಲ್ಲಿ ಮತ್ತೆ ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಶುಕ್ರವಾರ ರಾಂಚಿ ಕೋರ್ಟ್ ಆದೇಶಿಸಿದೆ.

ಮಧುಕೋಡಾ ಅವರು ತಮ್ಮ ತಾಯಿಗೆ ಆರೋಗ್ಯ ಸರಿ ಇಲ್ಲ ಎಂಬ ಕಾರಣ ನೀಡಿ ತಾತ್ಕಾಲಿಕ ಜಾಮೀನು ಪಡೆದುಕೊಂಡಿದ್ದರು. ಆ ಜಾಮೀನು ನಿನ್ನೆಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಮತ್ತೆ ಅವರು ಕೋರ್ಟ್‌ಗೆ ಶರಣಾಗಿದ್ದು, ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ನ್ಯಾಯಾಲಯಕ್ಕೆ ಶರಣಾಗುವ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ಮಧುಕೋಡಾ, ನನ್ನ ತಾಯಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿತ್ತು ಮತ್ತು ಅವರಲ್ಲಿ ನೈತಿಕ ಸ್ಥೈರ್ಯ ತುಂಬುವ ಅವಶ್ಯಕತೆ ಇತ್ತು. ಹೀಗಾಗಿ ನಾನು ಕಳೆದ ತಿಂಗಳು ನ್ಯಾಯಾಲಯದಿಂದ ತಾತ್ಕಾಲಿಕ ಜಾಮೀನು ಪಡೆದುಕೊಂಡಿದ್ದೆ ಎಂದರು.

ಅಕ್ರಮ ಆಸ್ತಿ ಸಂಪಾದನೆ ಹಾಗೂ 2500 ಕೋಟಿ ಹವಾಲ ಹಣ ಹೂಡಿಕೆ ಪ್ರಕರಣ ಸಂಬಂಧ ಆದಾಯ ತೆರಿಗೆ ಹಾಗೂ ಸಿಬಿಐ ಅಧಿಕಾರಿಗಳು 2009ರಲ್ಲಿ ದಾಳಿ ಮಾಡಿ ಬಂದಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement