ಮಂಗಳವಾರ ಚಾ.ನಗರ ಬಂದ್
ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ದಲಿತ ಸಂಘಟನೆಗಳು ಮಂಗಳವಾರ ಬಂದ್‌ಗೆ ಕರೆ ನೀಡಿವೆ.
ಚಾಮರಾಜನಗರ: ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ದಲಿತ ಸಂಘಟನೆಗಳು ಮಂಗಳವಾರ ಬಂದ್‌ಗೆ ಕರೆ ನೀಡಿವೆ.
ಮೂಲತಃ ಕಾಂಗ್ರೆಸಿಗರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೇ ಮುಖ್ಯಮಂತ್ರಿ ಸ್ಥಾನ ನೀಡಬೇಕಿತ್ತು ಎಂದು ಕಳೆದ 2 ದಿನಗಳಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವ ದಲಿತ ಸಂಘಟನೆಗಳು, ಇದೇ ಮಂಗಳವಾರ ಚಾಮರಾಜನಗರ ಬಂದ್ ಮಾಡಲು ಮುಂದಾಗಿವೆ. ಈಗಾಗಲೇ ದಲಿತ ಸಂಘಟನೆಗಳು ಚಾಮರಾಜನಗರ ಬಂದ್‌ಗೆ ಕರೆ ನೀಡಿದ್ದು, ಖರ್ಗೆ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ್ದಕ್ಕಾಗಿ ಮಂಗಳವಾರ ಸಾಂಕೇತಿಕ ಪ್ರತಿಭಟನೆ ನಡೆಸಲಿವೆ.
ಚಾಮರಾನಗರ ದಲಿತ ಸಂಘಟನೆಗಳ ಈ ನಿರ್ಧಾರಕ್ಕೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದು, ಬಂದ್ ಬೇರೆ ನಗರಳಿಗೂ ವ್ಯಾಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ನಾಳೆ ಬೆಂಗಳೂರಿನಲ್ಲಿ ನಡೆಯಲಿರುವ ಸಿದ್ಧರಾಮಯ್ಯ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ದಲಿತ ಸಂಘಟನೆಗಳು ಅಡ್ಡಿಪಡಿಸುವ ಸಾಧ್ಯತೆ ಇದೆ. ಹೀಗಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗುತ್ತಿದೆ.