ಎಂಬಿಎ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ: ಹೋಮ್ ಗಾರ್ಡ್ ಬಂಧನ
ಆಂಧ್ರಪ್ರದೇಶದ ಚಿತ್ತೂರ್ ಜಿಲ್ಲೆಯಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಪ್ರಕರಣ ಸಂಬಂಧ ..
ಹೈದರಾಬಾದ್: ಆಂಧ್ರಪ್ರದೇಶದ ಚಿತ್ತೂರ್ ಜಿಲ್ಲೆಯಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಪ್ರಕರಣ ಸಂಬಂಧ ಹೋಮ್ ಗಾರ್ಡ್ ಓರ್ವನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರಕ್ಕೆ ಒಳಗಾಗಿದ್ದ ವಿದ್ಯಾರ್ಥಿನಿ ನಿನ್ನೆ ರಾತ್ರಿ ಮದನಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಳು.
ಪ್ರಕರಣ ಸಂಬಂಧ ಯುವತಿಯ ಸಂಬಂಧಿಕರು ನೀಡಿದ ದೂರಿನ ಮೇಲೆ ಮದನಪಲ್ಲಿ ಪೊಲೀಸ್ ಠಾಣೆಯಲ್ಲಿ ಹೋಮ್ ಗಾರ್ಡ್ ಶಿವಕುಮಾರ್ ಸೇರಿದಂತೆ ಇತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಇಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಹತ್ಯೆಯಾಗಿರುವ ಯುವತಿ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆಯೂ ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ವಿದ್ಯಾರ್ಥಿನಿ ಹತ್ಯೆ ಖಂಡಿಸಿ, ಆಕೆಯ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.