ಯುಪಿಎ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ: ಮೋದಿ
ಕೇಂದ್ರದ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ..
ಅಹಮದಾಬಾದ್: ಕೇಂದ್ರದ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಸೋಮವಾರ ಹೇಳಿದರು.
'ಗುಜರಾತ್ ದಿನ'ದ ಅಂಗವಾಗಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಮೆರಿಕದ ಗುಜರಾತಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಅಮೆರಿಕದ 20ಕ್ಕು ಹೆಚ್ಚು ನಗರಗಳಲ್ಲಿ ನೆಲೆಸಿರುವ ಗುಜರಾತಿಗಳೊಂದಿಗೆ ಸುಮಾರು ಒಂದು ಗಂಟೆಗಳ ಕಾಲ ಪ್ರಶ್ನೊತ್ತರಗಳೊಂದಿಗೆ ಚರ್ಚಿಸಿದರು.
ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮೋದಿ, ಕಳಪೆ ಆಡಳಿತ ಮತ್ತು ಭ್ರಷ್ಟಾಚಾರದಿಂದ ದೇಶದ ಜನತೆ ಕೇಂದ್ರ ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿದ್ದಾರೆ ಎಂದರು. ಅಲ್ಲದೆ ಯುಪಿಎ ಸರ್ಕಾರದ ವೇಶಾಂಗ ನೀತಿಯ ವಿರುದ್ಧವೂ ವಾಗ್ದಾಳಿ ನಡೆಸಿದ ಮೋದಿ, ಕೇಂದ್ರದಲ್ಲಿ ಅಸಮರ್ಥ ನಾಯಕರು ಆಡಳಿತ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಈಗ ಜನರನ್ನು ಮತ್ತೆ ವಿಶ್ವಾಸಕ್ಕೆ ತೆಗೆದುಕೊಳ್ಳವುದು ಒಂದು ದೊಡ್ಡ ಸವಾಲು. ಆದರೂ ನಾವು ಮತ್ತೆ ಜನರ ವಿಶ್ವಾಸ ಗಳಿಸುವ ಅಗತ್ಯ ಇದೆ. ಅದು ಬರೀ ಮಾತಿನಿಂದ ಸಾಧ್ಯವಿಲ್ಲ ಎಂದು ಅವರು ಹೇಳಿದರು.