ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅರ್ಜಿ ತಿರಸ್ಕಾರ: ದತ್ ಗೆ ಶರಣಾಗತಿ ಅನಿವಾರ್ಯ

ದತ್ ಶರಣಾಗತಿ ಕಾಲಾವಕಾಶವನ್ನು ವಿಸ್ತರಿಸುವಂತೆ ನಿರ್ಮಾಪಕರು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

Srinivasa Murthy VN
Updated On : 14 May 2013, 4:13 am

ನವದೆಹಲಿ: ಸಂಜಯ್ ದತ್ ಅವರ ಶರಣಾಗತಿ ಕಾಲಾವಕಾಶವನ್ನು ವಿಸ್ತರಿಸುವಂತೆ ಬಾಲಿವುಡ್ ನಿರ್ಮಾಪಕರು ಮಂಗಳವಾರ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದು, ನ್ಯಾಯಾಲಯ ಮನವಿಯನ್ನು ತಿರಸ್ಕರಿಸಿದೆ.

ನಟ ಸಂಜಯ್ ದತ್ ಅವರು ನಟಿಸುತ್ತಿರುವ ಬಾಲಿವುಡ್ ಚಿತ್ರದ ನಿರ್ಮಾಪಕರೊಬ್ಬರು ಮನವಿ ಸಲ್ಲಿಸಿದ್ದು, ದತ್ ಅವರ ಶರಣಾಗತಿಯಿಂದಾಗಿ ತಮ್ಮ ಚಿತ್ರಗಳ ಚಿತ್ರೀಕರಣಕ್ಕೆ ತೊಂದರೆಯಾಗುತ್ತದೆ ಮತ್ತು ಇದರಿಂದಾಗಿ ತಮಗೆ ಕೋಟ್ಯಂತರ ರುಪಾಯಿ ನಷ್ಟವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ನಿರ್ಮಾಪಕರ ಮನವಿಯನ್ನು ಇಂದು ವಿಚಾರಣೆಗೆ ತೆಗೆದುಕೊಂಡ ನ್ಯಾ.ಬಿಎಸ್ ಚೌವ್ಹಾಣ್ ಮತ್ತು ದೀಪಕ್ ಮಿಶ್ರಾ ಅವರ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

1993ರ ಮುಂಬೈ ಸರಣಿ ಸ್ಫೋಟದ ವೇಳೆ ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೇ 10ರಂದು ದತ್ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಆದರೆ ನ್ಯಾಯಾಲಯದ ನಿರ್ಧಾರ, ದತ್ ಅಭಿನಯಿಸುತ್ತಿರುವ ಚಿತ್ರ ನಿರ್ಮಾಪಕರನ್ನು ಪೇಚಿಗೆ ಸಿಲುಕುವಂತೆ ಮಾಡಿತ್ತು. ಹೀಗಾಗಿ ನಿರ್ಮಾಪಕರು ದತ್ ಶರಣಾಗತಿ ಸಮಯವನ್ನು ವಿಸ್ತರಿಸುವಂತೆ ಸುಪ್ರೀಂಕೋರ್ಟ್‌ನಲ್ಲಿ ಮನವಿ ಸಲ್ಲಿದ್ದರು.

ಇದೀಗ ನಿರ್ಮಾಪಕರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದರಿಂದ ನಟ ಸಂಜಯ್ ದತ್ ಅವರು ನಾಳೆಯೇ ನ್ಯಾಯಾಲಯಕ್ಕೆ ಶರಣಾಗಬೇಕಾದ ಅನಿವಾರ್ಯತೆ ಎದುರಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement