ತಿಂಗಳಾಂತ್ಯಕ್ಕೆ ಜಪಾನ್ಗೆ ಪ್ರಧಾನಿ ಸಿಂಗ್ ಭೇಟಿ
ಈ ತಿಂಗಳ ಅಂತ್ಯದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಜಪಾನ್ಗೆ ಭೇಟಿ ನೀಡಲಿದ್ದು, ಈ ವೇಳೆ ನಾಗರಿಕ..
ಟೊಕಿಯೋ: ಈ ತಿಂಗಳ ಅಂತ್ಯದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಜಪಾನ್ಗೆ ಭೇಟಿ ನೀಡಲಿದ್ದು, ಈ ವೇಳೆ ನಾಗರಿಕ ಪರಮಾಣು ಸಹ ಭಾಗಿತ್ವ ಒಪ್ಪಂದದ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.
ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರು ಮೇ 27ರಿಂದ 30ರವರೆಗೆ ಜಪಾನ್ ಪ್ರವಾಸ ಕೈಗೊಂಡಿದ್ದು, ಜಪಾನ್ ಪ್ರಧಾನಿ ಶಿಂಝೋ ಅಬೆ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಅಲ್ಲಿನ ವಿದೇಶಾಂಗ ಸಚಿವಾಲಯ ಸ್ಪಷ್ಟಪಡಿಸಿದೆ.
ಉಭಯ ದೇಶಗಳ ನಾಯಕರು ಮೇ 29ರಂದು ಸಭೆ ಸೇರಲಿದ್ದಾರೆ ಎಂದು ಜಪಾನ್ ಸರ್ಕಾರದ ಮೂಲಗಳು ತಿಳಿಸಿವೆ ಎಂದು ಕ್ಯಾಡೊ ಸುದ್ದಿ ಸಂಸ್ಥೆ ವರದಿ ಮಾಡಿದೆ.