ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಶೆಟ್ಟರ್ ಆಯ್ಕೆ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಂಗಳವಾರ ಆಯ್ಕೆ ಮಾಡಲಾಗಿದೆ.

Lingaraj Badiger
Updated On : 14 May 2013, 6:42 am

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಂಗಳವಾರ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ನೂತನ ಶಾಸಕಾಂಗ ಪಕ್ಷದ ಸಭೆಯಲ್ಲಿ, ಶೆಟ್ಟರ್ ಅವರನ್ನು ವಿಧಾನಸಭೆ ನಾಯಕರನ್ನಾಗಿ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರನ್ನು ಸದನದ ಉಪನಾಯಕರನ್ನಾಗಿ ಆಯ್ಕೆ ಮಾಡವಾಯಿತು. ಅಲ್ಲದೆ ಪರಿಷತ್ ಪ್ರತಿಪಕ್ಷದ ನಾಯಕರನ್ನಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರನ್ನು ಆಯ್ಕೆ ಮಾಡಲಾಯಿತು.

ಇದೇ ವೇಳೆ ಸಭೆಯಲ್ಲಿ ಚುನಾವಣೆಯಲ್ಲಿ ಪಕ್ಷದ ಸೋಲಿನ ಆತ್ಮಾವಲೋಕನ ಹಾಗೂ ವಿಧಾನಸಭೆಯಲ್ಲಿ ಪ್ರತಿಪಕ್ಷವಾಗಿ ಪಕ್ಷದ ಕಾರ್ಯನಿರ್ವಹಣೆ ಬಗ್ಗೆಯೂ ಚರ್ಚಿಸಲಾಯಿತು.

ಬಿಜೆಪಿ ಮಾಜಿ ಅಧ್ಯಕ್ಷ ನಿತಿನ್ ಗಡ್ಕರಿ ಅವರ ನೇತೃತ್ವದಲ್ಲಿ ಈ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿ.ವಿ ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ಶಾಸಕರು, ಪರಿಷತ್ ಸದಸ್ಯರು ಭಾಗವಹಿಸಿದ್ದಾರೆ.

ಸಭೆಗೂ ಮುನ್ನ ಮಾತನಾಡಿದ್ದ ಶೆಟ್ಟರ್ ಅವರು, ಗೋ ಹತ್ಯೆ ನಿಷೇಧ ಮಸೂದೆ ಜಾರಿ ತರಬೇಕು ಎಂದು ಅಗ್ರಹಿಸಿದರು. ಅಲ್ಲದೆ ಒಂದು ವೇಳೆ ಸರ್ಕಾರ ಆ ಮಸೂದೆಗೆ ತಿದ್ದುಪಡಿ ತರಲು ಮುಂದಾದರೆ, ಅದರ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement