ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಬಳ್ಳಾರಿಯಲ್ಲಿ ಮತ್ತಿಬ್ಬರ ಬಂಧನ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು, ..

Lingaraj Badiger
Updated On : 15 May 2013, 5:18 am

ಬಳ್ಳಾರಿ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು, ಈ ಸಂಬಂಧ ಬಳ್ಳಾರಿಯಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ.

ಸಂಡೂರು ಮೂಲದವರಾದ ಮುರುಳಿ ಹಾಗೂ ಶ್ರೀನಿವಾಸ್ ಎಂಬುವವರನ್ನು ಸಿಬಿಐ ಅಧಿಕಾರಿಗಳು ಇಂದು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಬಂಧಿತ ಇಬ್ಬರು ಆರೋಪಿಗಳು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಕುಟುಂಬಕ್ಕೆ ಆಪ್ತರಾಗಿದ್ದರು ಎನ್ನಲಾಗಿದೆ.

ಇತ್ತೀಚಿಗಷ್ಟೇ ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆಯನ್ನು ಮತ್ತಷ್ಟು ವಿಸ್ತರಿಸಿದ್ದ ಸಿಬಿಐ ಅಧಿಕಾರಿಗಳು, ಬಳ್ಳಾರಿಯಲ್ಲಿ ಕಾರ್ಯನಿರ್ವಹಿಸಿದ್ದ ಎಸ್ಪಿ, ಎಸ್ಪಿ, ಐಎಫ್‌ಎಸ್ ಅಧಿಕಾರಿ, ಕಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅರಣ್ಯ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement