ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶನಿವಾರ ಸಚಿವ ಸಂಪುಟ ರಚನೆ: ಸಿಎಂ ಸಿದ್ದು

ಮೇ 18ರಂದು ಶನಿವಾರ ಬೆಳಗ್ಗೆ ಸಚಿವ ಸಂಪುಟ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ..

Lingaraj Badiger
Updated On : 16 May 2013, 1:39 am

ನವದೆಹಲಿ: ಮೇ 18ರಂದು ಶನಿವಾರ ಬೆಳಗ್ಗೆ ಸಚಿವ ಸಂಪುಟ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಈ ಮುಂಚೆ ಶುಕ್ರವಾರ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಆ ಬಗ್ಗೆ ಇಂದು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದು, ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ ಇನ್ನು ಅಂತಿಮವಾಗಿಲ್ಲ. ಹೀಗಾಗಿ ಸಚಿವ ಸಂಪುಟ ಶನಿವಾರ ರಚನೆಯಾಗಲಿದೆ ಎಂದು ಹೇಳಿದರು.

ಶನಿವಾರ ಬೆಳಗ್ಗೆ 10ಗಂಟೆಗೆ ರಾಜಭವನದ ಗಾಜಿನಮನೆಯಲ್ಲಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಮೊದಲನೇ ಹಂತದಲ್ಲಿ ಸುಮಾರು 20 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement