ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಸೇರಿ 3 ಆಟಗಾರರ ಬಂಧನ

ಐಪಿಎಲ್ ಪಂದ್ಯದಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಕ್ರಿಕೆಟಿಗ ಶ್ರೀಶಾಂತ್ ಸೇರಿದಂತೆ ರಾಜಸ್ಥಾನ್ ರಾಯಲ್ಸ್ ತಂಡದ ಮೂವರು...

Lingaraj Badiger
Updated On : 16 May 2013, 1:12 am

ಮುಂಬೈ: ಐಪಿಎಲ್ ಪಂದ್ಯದಲ್ಲಿ ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ಕ್ರಿಕೆಟಿಗ ಶ್ರೀಶಾಂತ್ ಸೇರಿದಂತೆ ರಾಜಸ್ಥಾನ್ ರಾಯಲ್ಸ್ ತಂಡದ ಮೂವರು ಆಟಗಾರರನ್ನು ಗುರುವಾರ ದೆಹಲಿ ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ.

ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಇಂದು ಬೆಳಗಿನ ಜಾವ 2.30ರ ಸುಮಾರಿಗೆ ದೆಹಲಿ, ಮುಂಬೈ ಹಾಗೂ ಅಹಮದಾಬಾದ್‌ನಲ್ಲಿ ದಾಳಿ ನಡೆಸಿದ ದೆಹಲಿ ಪೊಲೀಸರು, ರಾಜಸ್ಥಾನ್ ರಾಯಲ್ಸ್ ತಂಡದ ವೇಗಿ ಎಸ್.ಶ್ರೀಶಾಂತ್, ಅಜಿತ್ ಚಂಡಿಲಾ ಹಾಗೂ ಅಂಕಿತ್ ಚೌವ್ಹಾಣ್ ಅವರನ್ನು ಬಂಧಿಸಿದ್ದಾರೆ.

ಸ್ಪಾಟ್ ಫಿಕ್ಸಿಂಗ್‌ಗೆ ಸಹಕರಿಸುತ್ತಿದ್ದ ಆರೋಪದ ಮೇಲೆ ಏಳು ಜನ ಬುಕ್ಕಿಗಳನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇನ್ನು ರಾಜಸ್ಥಾನ್ ರಾಯಲ್ಸ್ ತಂಡದ ಒಡತಿಯಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು, ತಮ್ಮ ತಂಡದ ಆಟಗಾರರ ಬಂಧನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಈ ಮೂವರು ಆಟಗಾರರ ಅಮಾನತು
ಶ್ರೀಶಾಂತ್ ಸೇರಿ ಮೂವರು ಆಟಗಾರರನ್ನು ದೆಹಲಿ ಪೊಲೀಸರು ಬಂಧಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಬಿಸಿಸಿಐ, ಈ ಮೂವರು ಆಟಗಾರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶಿಸಿದೆ. ಅಲ್ಲದೆ ಪ್ರಕರಣದ ತನಿಖೆಗೆ ಅರುಣ್ ಜೇಟ್ಲಿ ನೇತೃತ್ವದ ಶಿಸ್ತು ಸಮಿತಿ ರಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement