ನಾಳೆ 29 ಸಚಿವರಿಂದ ಪ್ರಮಾಣ: ಸಿಎಂ ಸಿದ್ದು
ಮೊದಲ ಹಂತದಲಿ ನಾಳೆ 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ..
ಮೈಸೂರು: ಮೊದಲ ಹಂತದಲಿ ನಾಳೆ 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ದೆಹಲಿಯಿಂದ ನೆರವಾಗಿ ಮೈಸೂರಿಗೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಳೆ ಬೆಳಗ್ಗೆ 10.30ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಿದರು. ಆದರೆ ಪ್ರಮಾಣ ಸ್ವೀಕರಿಸುವ ನೂತನ ಸಚಿವರ ಹೆಸರು ಬಹಿರಂಗಪಡಿಸಲು ಅವರು ನಿರಾಕರಿಸಿದರು.
ಇದೇ ವೇಳೆ, ಕಳಂಕಿತರು ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆ ತಮ್ಮ ಸಂಪುಟದಲ್ಲಿ ಸ್ಥಾನವಿಲ್ಲ ಎಂದು ಸಿದ್ದು ಹೇಳಿದ್ದಾರೆ.