ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಪೀಕರ್ ಆಗಿ ಕಾಗೋಡು ತಿಮ್ಮಪ್ಪ ಆಯ್ಕೆ: ಸಿಎಂ

ಮಾಜಿ ಸಚಿವ ಹಾಗೂ ಸಾಗರ ಶಾಸಕ ಕಾಗೋಡು ತಿಮ್ಮಪ್ಪ ಅವರನ್ನು ಮುಂದಿನ ವಿಧಾನಸಭಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ..

Lingaraj Badiger
Updated On : 17 May 2013, 2:27 am

ನವದೆಹಲಿ: ಮಾಜಿ ಸಚಿವ ಹಾಗೂ ಸಾಗರ ಶಾಸಕ ಕಾಗೋಡು ತಿಮ್ಮಪ್ಪ ಅವರನ್ನು ಮುಂದಿನ ವಿಧಾನಸಭಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಸಚಿವ ಸಂಪುಟ ರಚನೆ ಸಂಬಂಧ ದೆಹಲಿಯಲ್ಲಿರುವ ಸಿದ್ದು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸಂಪುಟ ಸೇರುವ ಸಚಿವರ ಪಟ್ಟಿ ಸಿದ್ಧವಾಗಿದೆ. ಆದರೆ ಅದಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಬೇಕಿದೆ ಎಂದರು.

ಇದೇ ವೇಳೆ ಸ್ಪೀಕರ್ ಸ್ಥಾನದ ಕುರಿತ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದು ಅವರು, ಕಾಂಗ್ರೆಸ್‌ನ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ ಅವರನ್ನು ಸ್ಪೀಕರ್ ಸ್ಥಾನಕ್ಕೆ ಪರಿಗಣಿಸಲಾಗುತ್ತಿದೆ ಎಂದು ಉತ್ತರಿಸಿದರು.

ಸಿದ್ದರಾಮಯ್ಯ ಅವರ ಈ ಹೇಳಿಕೆಯಿಂದ ಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿದ್ದ ಕಾಗೋಡು ತಿಮ್ಮಪ್ಪ ಅವರ ಬೆಂಬಲಿಗರಿಗೆ ಭಾರಿ ನಿರಾಶೆಯಾಗಿದ್ದು, ಅವರ ಕೆಲವು ಬೆಂಬಲಿಗ ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಜಾಯತ್ ಸದಸ್ಯರು ರಾಜಿನಾಮೆ ನೀಡಲು ಮುಂದಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement