ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಗ್ನಿ ಅವಘಡ
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಪ್ರವೇಶ ದ್ವಾರ 9ರ ಜನರೇಟರ್ ಕೊಠಡಿಯಲ್ಲಿ ಮಳೆಯಿಂದಾಗಿ ಅಗ್ನಿ ಆವಘಡ ಸಂಭವಿಸಿದೆ.
ನಗರದಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಜನರೇಟರ್ ಕೊಠಡಿಯಲ್ಲಿ ಮಳೆಯ ನೀರು ಸಂಗ್ರಹವಾಗಿದ್ದರಿಂದಾಗಿ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಕಾರ್ಯಪ್ರವೃತ್ತರಾದ ಕ್ರೀಡಾಂಗಣದ ರಕ್ಷಣಾ ಸಿಬ್ಬಂದಿ ಜನರೇಟರಗಳ ಕಾರ್ಯ ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಬೆಂಕಿ ನಂದಿಸಲು ಸಾಧ್ಯವಾಗಿದೆ.
ಸುದ್ದಿ ತಿಳಿದ ಕೂಡಲೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಉತ್ತರ ವಲಯದ ಡಿಸಿಪಿ ಸಿದ್ದರಾಮಪ್ಪ, ಮಳೆಯಿಂದಾಗಿ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಆದರೆ ಬೆಂಕಿಯ ಪ್ರಮಾಣ ಕಡಿಮೆ ಇದ್ದುದರಿಂದ ಬೆಂಕಿ ನಂದಿಸಲಾಗಿದ್ದು, ಅವಗಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.