ಡಿಕೆಶಿ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಶಾಸಕ ಡಿ.ಕೆ. ಶಿವಕುಮಾರ್‌ಗೆ ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಆಕ್ರೋಶಗೊಂಡ ಡಿಕೆಶಿ ಬೆಂಬಲಿಗರು ಎಸ್.ಎಂ. ಕೃಷ್ಣ ಹಾಗೂ ಕಾಂಗ್ರೆಸ್ ರಾಜ್ಯಾದ್ಯಕ್ಷ ಡಾ.ಜಿ. ಪರಮೇಶ್ವರ ನಿವಾಸದೆದುರು ಬೆಂಬಲಿಗನೊಬ್ಬ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ನಿವಾಸದೆದುರು ಪ್ರತಿಭಟನೆ ನಡೆಸಿದ ಬೆಂಬಲಿಗರು, ಡಿಕೆಶಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಿಬೇಕು ಎಂದು ಆಗ್ರಹಿಸಿದರು. ಅಲ್ಲದೆ ಈ ಕೂಡಲೇ ಕೃಷ್ಣ ಅವರು ಬೆಂಗಳೂರಿಗೆ ಆಗಮಿಸಬೇಕು ಎಂದು ಪ್ರತಿಭಟಕಾರರು ಒತ್ತಾಹಿಸಿದರು.
ಈ ವೇಳೆ ಪ್ರತಿಭಟನಕಾರರೊಂದಿಗೆ ಮಾತನಾಡಿದ ಪರಮೇಶ್ವರ, ಡಿಕೆ ಶಿವಕುಮಾರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ನೀವು ನಡೆಸುತ್ತಿರುವ ಹೋರಾಟಕ್ಕೆ ನನ್ನ ಬೆಂಬಲವಿದೆ. ಶಿವಕುಮಾರ್ ಅವರಿಗೆ ಸಚಿವಸ್ಥಾನ ತಪ್ಪಿದ್ದಕ್ಕೆ ಕಾರಣ ತಿಳಿದಿಲ್ಲ. ಆ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.