ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿದ್ದು ನೇತೃತ್ವದಲ್ಲಿ ಮೊದಲ ಸಂಪುಟ ಸಭೆ: ಖಾತೆ, ನೀರಿನ ಬಗ್ಗೆ ಚರ್ಚೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ನೀರಿನ ಬಗ್ಗೆ ಹಾಗೂ ಖಾತೆಗಳ..

Lingaraj Badiger
Updated On : 18 May 2013, 1:31 am

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ನೀರಿನ ಬಗ್ಗೆ ಹಾಗೂ ಖಾತೆಗಳ ಹಂಚಿಕೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು ಎಂದು ನೂತನ ಸಚಿವ ಶ್ರೀನಿವಾಸ್ ಪ್ರಸಾದ್ ಅವರು ಶನಿವಾರ ಹೇಳಿದ್ದಾರೆ.

28 ಸಚಿವರು ಪದಗ್ರಹಣ ಮಾಡಿದ ನಂತರ ಕೆಲವೇ ಕ್ಷಣಗಳಲ್ಲಿ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್ ಅವರು, ಕೆಆರ್‌ಎಸ್‌ನಲ್ಲಿ ನೀರು ಖಾಲಿಯಾಗಿದೆ. ಹೀಗಾಗಿ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಕುಡಿಯುವ ನೀರಿನ ಸಮಸ್ಯೆ ಇದೆ. ನೂತನ ಸರ್ಕಾರಕ್ಕೆ ಕುಡಿಯುವ ನೀರಿನ ಸಮಸ್ಯೆಯೇ ದೊಡ್ಡ ಸವಾಲಾಗಿದೆ. ಆದರೂ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುತ್ತೇವೆ ಎಂದರು.

ಸಂಪುಟ ಸಭೆಯಲ್ಲಿ 28 ಸಚಿವರು ಭಾವಹಿಸಿದ್ದರು. ಈ ವೇಳೆ ಖಾತೆಗಳ ಹಂಚಿಕೆಯ ಬಗ್ಗೆಯೂ ಚರ್ಚಿಸಲಾಯಿತು ಎಂದು ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement