ಸ್ಪಾಟ್ ಫಿಕ್ಸಿಂಗ್: ಮಾಜಿ ಕ್ರಿಕೆಟಿಗ ಸೇರಿ ಮತ್ತೆ ಮೂವರ ಸೆರೆ
ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತೆ ಮೂವರು ಬುಕ್ಕಿಗಳನ್ನು ಬಂಧಿಸಿದ್ದಾರೆ.
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತೆ ಮೂವರು ಬುಕ್ಕಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಮನೀಶ್ ಬುಡೀವಾ, ಸನಿಲ್ ಮತ್ತು ಕಿರಣ ಎಂದು ಗುರುತಿಸಲಾಗಿದೆ. ಈ ಮೂವರ ಪೈಕಿ ಮನೀಶ್ ಬುಡೀವಾ ಮಾಜಿ ರಣಜಿ ಕ್ರಿಕೆಟ್ ಆಟಗಾರನಾಗಿದ್ದು, 2003 ರಿಂದ 2005ರವರೆಗೆ ವಿದರ್ಭ ಕ್ರಿಕೆಟ್ ಸಂಸ್ಥೆಯ ಪರವಾಗಿ ಆಟವಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಈ ಮೂವರನ್ನು ದೆಹಲಿ ವಿಶೇಷ ಪೊಲೀಸರು ಔರಂಗಾಬಾದ್ನಲ್ಲಿ ಬಂಧಿಸಿದ್ದಾರೆ.
ಅಲ್ಲದೆ ಪ್ರಕರಣ ಸಂಬಂಧ ಮತ್ತೋರ್ವ ಬುಕ್ಕಿ ಬಾಬುರಾವ್ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.