ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಬೆನಜೀರ್ ಭುಟ್ಟೋ ಪ್ರಕರಣ: ಮುಷರಫ್‌ಗೆ ಜಾಮೀನು

Mainashree
Updated On : 20 May 2013, 6:32 am

ಇಸ್ಲಾಮಾಬಾದ್: 2007ರ ಬೆನಜೀರ್ ಭುಟ್ಟೋ ಹತ್ಯೆ ಪ್ರಕರಣ ಸಂಬಂಧ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಪಾಕಿಸ್ತಾನದ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ಪಾಕಿಸ್ತಾನದ ಮಾಜಿ ಅಧ್ಯಕ್ಷೆ ಬೆನಜೀರ್ ಭುಟ್ಟೋ ಅವರಿಗೆ ಉದ್ದೇಶ ಪೂರ್ವಕವಾಗಿಯೇ ಸೂಕ್ತ ರಕ್ಷಣೆ ಒದಗಿಸಿಲ್ಲ ಎಂದು ಮುಷರಫ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ನ್ಯಾಯಾಲಯ ಮುಷರಫ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.

ರಾವಲ್‌ಪಿಂಡಿಯಲ್ಲಿರುವ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯದ ನ್ಯಾಯಾಮೂರ್ತಿ ಚೌಧರಿ ಹಬೀಬ್-ಉರ್-ರೆಹಮಾನ್ ಅವರು ಜಾಮೀನು ನೀಡಿದ್ದಾರೆ.

ಇಂದು ಬೆಳಿಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಎರಡು ಕಡೆಯ ವಕೀಲರ ವಾದ ಕೇಳಿದ ನಂತರ ಮುಷರಫ್ ಅವರಿಗೆ ಜಾಮೀನು ನೀಡಿದೆ.

ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್ ವಿರುದ್ಧ ಭ್ರಷ್ಟಾಚಾರ, ಆಡಳಿತ ದುರುಪಯೋಗದಂತಹ ಗಂಭೀರ ಪ್ರಕರಣಗಳು ಸೇರಿದಂತೆ ಪಾಕ್ ಮಾಜಿ ಅಧ್ಯಕ್ಷೆ ಬೆನಜೀರ್ ಭುಟ್ಟೋ ಹಾಗೂ ಬಲೂಚಿಸ್ತಾನದ ನಾಯಕ ನವಾಬ್ ಅಕ್ಬರ್ ಬುಗ್ಟಿ ಅವರ ಹತ್ಯೆ ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement