ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉ.ಪ್ರದೇಶದಲ್ಲಿ ರಸ್ತೆ ಅಪಘಾತ: 24 ಸಾವು

ಉತ್ತರ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಕನಿಷ್ಟ 24 ಮಂದಿ ಮೃತಪಟ್ಟಿದ್ದಾರೆ..

Lingaraj Badiger
Updated On : 21 May 2013, 3:35 am

ಲಖನೌ: ಉತ್ತರ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಕನಿಷ್ಟ 24 ಮಂದಿ ಮೃತಪಟ್ಟಿದ್ದಾರೆ ಮತ್ತು 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ ಮತ್ತು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಲಖನೌದಿಂದ 150 ಕಿ.ಮಿ.ದೂರದಲ್ಲಿರುವ ಕನೌಜ್ ಬಳಿ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರ ಪೈಕಿ 16 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗಿನ ಜಾವ ಮಥುರಾದ ಕೊಸಿಕಲನ್ ಬಳಿ ಸಂಭವಿಸಿದ ಮತ್ತೊಂದು ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಮೂರನೇ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶಹಜಾನಪುರದ ಪೂರ್ಣಿಪುರ ಪ್ರದೇಶದ ಬಂಡಾದ ಬಳಿ ಖಾಸಗಿ ಬಸ್ವೊಂದು ಸೇತುವೆ ಮೇಲಿಂದ ನದಿಗೆ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement