ಸಂಸದ ಸ್ಥಾನಕ್ಕೆ ಕುಮಾರಸ್ವಾಮಿ, ಚಲುವರಾಯಸ್ವಾಮಿ ರಾಜಿನಾಮೆ
ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಾಜಿ ..
ನವದೆಹಲಿ: ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದ ಚಲುವರಾಯಸ್ವಾಮಿ ಅವರು ಮಂಗಳವಾರ ತಮ್ಮ ಸಂಸದ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ.
ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ವಿದೇಶ ಪ್ರವಾಸದಲ್ಲಿದ್ದ ಕಾರಣ ಲೋಕಸಭಾ ಜಂಟಿ ಕಾರ್ಯದರ್ಶಿ ವಿ.ಆರ್.ರಮೇಶ್ ಅವರಿಗೆ ಈ ಇಬ್ಬರು ಜೆಡಿಎಸ್ ಸಂಸದರು ಇಂದು ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದರು.
ಬಳಿಕ ಇಬ್ಬರೂ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿ, ಸಂಸದರಾಗಿ ಕಾರ್ಯನಿರ್ವಹಿಸಲು ಸಹಕಾರ ನೀಡಿದ್ದಕ್ಕೆ ಧನ್ಯವಾದ ಹೇಳಿದರು.