ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ಪಿಐಎಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

Mainashree
Updated On : 21 May 2013, 2:20 am

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನಲ್ಲಿ ಸ್ಪಾಟ್ ಫಿಕ್ಸಿಂಗ್ ಹಗರಣ ನಡೆದಿರುವುದರಿಂದ ಉಳಿದಿರುವಂತಹ ಪಂದ್ಯಾವಳಿಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ನ್ಯಾಯಾಮೂರ್ತಿಗಳಾದ ಬಿ.ಎಸ್ ಚೌವ್ಹಾಣ್ ಮತ್ತು ದೀಪಕ್ ಮಿಶ್ರಾ ನೇತೃತ್ವದ ನ್ಯಾಯಾಪೀಠ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದ್ದು, ಇಂದು ಮದ್ಯಾಹ್ನ 2 ಗಂಟೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲಿದೆ.

ಐಪಿಎಲ್ ಪಂದ್ಯಾವಳಿಗಳಲ್ಲಿ ಸ್ಪಾಟ್ ಫಿಕ್ಸಿಂಗ್ ಹಗರಣ ನಡೆದಿರುವುದರಿಂದ ಇನ್ನುಳಿದಂತ ಪಂದ್ಯಗಳಿಗೆ ತಡೆಯಾಜ್ಞೆ ಹೇರಬೇಕು ಹಾಗೂ ಹಗರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಲಕ್ನೋ ನಿವಾಸಿ ಸುದರ್ಶ್ ಅವಸ್ತಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಪ್ರಾರಂಭದಿಂದಲೇ ಐಪಿಎಲ್ ಪಂದ್ಯಾವಳಿಯಲ್ಲಿ ಹಗರಣ ನಡೆಯುತ್ತಿದೆ. ಹರಾಜು ಪ್ರಕ್ರಿಯೆಯಲ್ಲಿ ಕಪ್ಪು ಹಣ ಹೆಚ್ಚಾಗಿ ಬಳಕೆಯಾಗಿದೆ. ಭ್ರಷ್ಟಾಚಾರಿಗಳು ಐಪಿಎಲ್ ಪಂದ್ಯಾವಳಿಯನ್ನು ದುರಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಸುದರ್ಶ್, ತನಿಖೆ ಪೂರ್ಣಗೊಳ್ಳುವವರೆಗೂ ಐಪಿಎಲ್ ಪಂದ್ಯಾವಳಿಗೆ ತಡೆಯಾಜ್ಞೆ ಹೇರಬೇಕು ಎಂದು ನ್ಯಾಯಾಲಯಕ್ಕೆ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement