ಕೇಂದ್ರದಿಂದ ಹೆಚ್ಚಿನ ಅನುದಾನಕ್ಕೆ ಸಿದ್ದು ಮನವಿ
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಎಸ್.ಸಿದ್ದಾರಾಮಯ್ಯ ಅವರು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ ಅವರನ್ನು ಬುಧವಾರ ದೆಹಲಿಯ ಕೃಷಿ ಭವನದಲ್ಲಿ ಭೇಟಿ ಮಾಡಿ ನರೇಗಾ ಯೋಜನೆ ಬಗ್ಗೆ ಚರ್ಚಿಸಿದ್ದಾರೆ.
ಇಂದು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರ ಔತಣಕೂಟದಲ್ಲಿ ಭಾಗಿಯಾದ ನಂತರ, ಜೈರಾಮ್ ರಮೇಶ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡವಂತೆ ಕೋರಿ ಮನವಿ ಪತ್ರ ಸಲ್ಲಿಸಿದ್ದಾರೆ.
ಹಳ್ಳಿಗಳ ರಸ್ತೆ ಅಭಿವೃದ್ಧಿ, ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗಾಗಿ ಕೇಂದ್ರದಿಂದ ಅನುದಾನ ನೀಡಿಬೇಕು ಎಂದು ಮನವಿ ಮಾಡಿದ್ದಾರೆ.