ರಾಹುಲ್ ಪ್ರಧಾನಿಯಾಗುವ ಸಮಯ: ಕಮಲ್‌ನಾಥ್
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನ ಮಂತ್ರಿಯಾಗಲು ಇದು ಸೂಕ್ತ ಸಮಯ ಎಂದು ಕಾಂಗ್ರೆಸ್ ನಾಯಕ ಕಮಲ್‌ನಾಥ್ ಬುಧವಾರ ಹೇಳಿದ್ದಾರೆ.
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಈಗಾಗಲೇ ಮನಮೋಹನ್ ಸಿಂಗ್ ಅವರು ಪ್ರಧಾನ ಮಂತ್ರಿಯಾಗಿ 10 ವರ್ಷ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ರಾಹುಲ್ ಗಾಂಧಿಗೆ ಅವಕಾಶ ನೀಡಬೇಕು. ರಾಹುಲ್ ಗಾಂಧಿ ಉಪಾಧ್ಯಕ್ಷರಾಗಿ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದಾರೆ.
ವಿರೋಧ ಪಕ್ಷಗಳು ಮನಮೋಹನ್ ಸಿಂಗ್ ಅವರು ಸೋನಿಯಾ ಗಾಂಧಿ ಮಾತಿನಂತೆ ನಡೆಯುತ್ತಾರೆ ಆರೋಪ ಮಾಡಿವೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಸೋನಿಯಾ ಮಾತಿನಂತೆ ಪ್ರಧಾನಿ ನಡೆಯುತ್ತಾರೆಂಬುದು ಸುಳ್ಳು. ಯಾವುದೇ ವಿಚಾರವಾಗಿ ನಿರ್ಧಾರ ಕೈಗೊಳ್ಳಬೇಕಾದರೆ ಇಬ್ಬರು ಪರಸ್ಪರ ಚರ್ಚೆ ನಡೆಸುತ್ತಾರೆ. ಪ್ರಧಾನಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಸೇವೆ ಸಲ್ಲಿಸುವದರಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕಮಲ್‌ನಾಥ್ ಹೇಳಿದ್ದಾರೆ.