ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ಚೆನ್ನೈ ಸೂಪರ್ ಕಿಂಗ್ಸ್ ಸಿಇಓ ವಿಚಾರಣೆ ಸಾಧ್ಯತೆ

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಸಂಬಂಧ ಮುಂಬೈ ಪೊಲೀಸರು ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ...

Mainashree
Updated On : 22 May 2013, 5:21 am

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ಸಂಬಂಧ ಮುಂಬೈ ಪೊಲೀಸರು ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಎನ್ ಶ್ರೀನಿವಾಸನ್ ಅವರ ಅಳಿಯ ಗುರುನಾಥ್ ಮೇಯಪ್ಪನ್ ಅವರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ.

ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಗುರುನಾಥ್ ಅವರ ಪಾತ್ರವಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಗುರುನಾಥ್ ಮೇಯಪ್ಪನ್ ಬಾಲಿವುಟ್ ನಟ ವಿಂದು ದಾರಾ ಸಿಂಗ್ ಅವರೊಂದಿಗೆ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.

ಗುರುನಾಥ್ ಅವರು ಚೆನ್ನೈ ಸೂಪರ್ ಕಿಂಗ್ಸ್ ಸಿಇಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ವಿಂದೂ ಅವರಿಗೆ ತುಂಬಾ ಆಪ್ತರಾಗಿದ್ದು, ಹೆಚ್ಚು ಸಂಪರ್ಕದಲ್ಲಿದ್ದರು. ವಿಂದೂ ಅವರ ದೂರವಾಣಿ ಕರೆಗಳ ವಿವರದಲ್ಲಿ ಗುರನಾಥ್ ಅವರಿಗೆ ಹೆಚ್ಚು ಕರೆಮಾಡಲಾಗಿದೆ.

ಸ್ಪಾಟ್ ಫಿಕ್ಸಿಂಗ್ ಹಗರಣ ಸಂಬಂಧ ಬಾಲಿವುಡ್ ನಟ ವಿಂದು ದಾರಾ ಸಿಂಗ್ ಅವರನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದರು. ಬಂಧಿತ ಬುಕ್ಕಿ ರಮೇಶ್ ವ್ಯಾಸ್ ವಿಚಾರಣೆಗೊಳಪಡಿಸಿದಾಗ ವ್ಯಾಸ್ ಅವರ ಸಂಪರ್ಕದಲ್ಲಿರುವ ವ್ಯಕ್ತಿಗಳ ಪಟ್ಟಿಯಲ್ಲಿ ವಿಂದು ಹೆಸರು ಕಂಡು ಬಂದಿತ್ತು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement