ಬಾಂಬ್ ಸ್ಫೋಟ: 12 ಸಾವು
ಇಸ್ಲಾಮಾಬಾದ್: ಪಾಕಿಸ್ತಾನದ ವಾಯುವ್ಯ ದಿಕ್ಕಿನಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಬಸ್ನಲ್ಲಿದ್ದ 10 ಭದ್ರತಾ ಅಧಿಕಾರಿಗಳು ಸೇರಿದಂತೆ 12 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಆಟೋ ರಿಕ್ಷಾದಲ್ಲಿ ಬಾಂಬ್ ಇರಿಸಿ ಸ್ಫೋಟಿಸಲಾಗಿದೆ. ಭದ್ರತಾ ಅಧಿಕಾರಿಗಳು ಹೋಗುತ್ತಿದ್ದ ಬಸ್ನ್ನು ಗುರಿಯಾಗಿಸಿಕೊಂಡಿದ್ದ ದುಷ್ಕರ್ಮಿಗಳು, ಆಟೋ ರಿಕ್ಷಾದ ಪಕ್ಕದಲ್ಲಿ ಬಸ್ ಹಾದು ಹೋದ ಸಂದರ್ಭದಲ್ಲಿ ರಿಮೋಟ್ ಕಂಟ್ರೋಲ್ನಿಂದ ಬಾಂಬ್ ಸ್ಫೋಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಐವರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ಹೇಳಿದ್ದಾರೆ.