ನಾಳೆ ಸಚಿವರಾಗಿ ಪಾಟೀಲ್ ಪ್ರಮಾಣ: ಸಿಎಂ
ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರು ಮೇ 25ರಂದು..
ಬೆಂಗಳೂರು: ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರು ಮೇ 25ರಂದು ಸಚಿವರಾಗಿ ಪ್ರಮಾಣ ವಚನ ಸ್ಪೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ. ಈ ಮೂಲಕ ಅವಕಾಶ ವಂಚಿತ ವಿಧಾನ ಪರಿಷತ್ ಸದಸ್ಯರಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಿದಂತಾಗಿದೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಯಮ್ಯ, ನಾಳೆ ಸಂಪುಟ ವಿಸ್ತರಣೆಯಾಗಲಿದ್ದು, ಎಸ್.ಆರ್.ಪಾಟೀಲ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.
ಗುರುವಾರ ಎಐಸಿಸಿ ಅಧ್ಯಕ್ಷೆ ಸೋನಿಯಾ ಅವರನ್ನು ಭೇಟಿ ಮಾಡಿ ಸುಮಾರು 15 ನಿಮಿಷ ಚರ್ಚಿಸಿದ ಸಿದ್ದರಾಮಯ್ಯ ಅವರು, ಸಂಪುಟದಲ್ಲಿ ಪರಿಷತ್ ಸದಸ್ಯರಿಗೆ ಸ್ಥಾನ ನೀಡುವ ಕುರಿತು ಮಾತುಕತೆ ನಡೆಸಿ ಒಬ್ಬ ಸದಸ್ಯರಿಗೆ ಸ್ಥಾನ ನೀಡಲು ಅನುಮತಿ ಪಡೆದಿದ್ದರು.
ಭೇಟಿ ವೇಳೆ ವಿಧಾನಸಭಾಧ್ಯಕ್ಷರು ಮತ್ತು ಉಪಸಭಾಧ್ಯಕ್ಷರ ಆಯ್ಕೆ ಕುರಿತೂ ಮಾತುಕತೆ ನಡೆಸಿದ್ದರು.