ಬಾಲಿವುಡ್ ನಟಿ ಸನಾ ಖಾನ್ ವಿರುದ್ಧ ಕಿಡ್ನಾಪ್ ಕೇಸ್ ದಾಖಲು
ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮೆಂಟಲ್ ಚಿತ್ರದ ಮೂಲಕ ಚರ್ಚೆಗೊಳಗಾಗಿದ್ದ ನಟಿ ಸನಾ ಖಾನ್ ವಿರುದ್ಧ ಕಿಡ್ನಾಪ್ ಕೇಸ್ ದಾಖಲಾಗಿದೆ.
15 ವರ್ಷದ ಅಪ್ರಾಪ್ತೆಯನ್ನು ಅಪಹರಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಸನಾ ಖಾನ್ ವಿರುದ್ಧ ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸನಾ ಖಾನ್ ಅವರ ಸೋದರ ಸಂಬಂಧಿ ನವೇದ್ ಖಾನ್ 15 ವರ್ಷದ ಯುವತಿಯ ಜೊತೆ ಫೇಸ್ಬುಕ್ನಲ್ಲಿ ಸ್ನೇಹ ಬೆಳೆಸಿದ್ದನು. ಸ್ನೇಹ ಪ್ರೀತಿಯಾಗಿ ತಿರುಗಿ ಆಕೆ ಬಳಿ ಮದುವೆಯಾಗುವಂತೆ ಒತ್ತಾಯಿಸಿದ್ದನು. ಇದಕ್ಕೆ ವಿರೋಧ ವ್ಯಕ್ತ ಪಡಿಸಿದ ಹಿನ್ನಲೆಯಲ್ಲಿ ಸನಾ ಖಾನ್ ಸೋದರ ಸಂಬಂಧಿಗೆ ಸಾತ್ ನೀಡಿ ಹುಡಿಗಿಯನ್ನು ಅಪಹರಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ, ಶಾಲೆ ಮುಗಿಸಿಕೊಂಡು ಮನೆಗೆ ಹಿಂದುರಿಗುತ್ತಿರುವ ಮಾರ್ಗದಲ್ಲಿ ಆಕೆಯನ್ನು ಅಪಹರಿಸಲು ಯತ್ನಿಸಿದ್ದಾರೆ ಎಂದು ಬಾಲಕಿಯ ತಾಯಿ ದೂರು ನೀಡಿದ್ದಾರೆ.
ಸನಾ ಖಾನ್ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.