ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ರಾಜ್ಯದ 5 ಜಿಲ್ಲೆಗಳಲ್ಲಿ ಏಕಕಾಲಕ್ಕೆ 'ಲೋಕಾ' ದಾಳಿ

ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು..

Lingaraj Badiger
Updated On : 24 May 2013, 1:10 am

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ತಂಡ ಇಂದು ಬೆಳಗ್ಗೆ ಬೆಂಗಳೂರು, ಕೊಡಗು ಕೋಲಾರ, ಚಿಕ್ಕಮಗಳೂರು ಹಾಗೂ ದಾವಣಗೆರೆಯಲ್ಲಿ ಏಕಕಾಲಕ್ಕೆ ಹಲವು ಅಧಿಕಾರಿಗಳ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರಿನ ರಾಜಾರಾಜೇಶ್ವರಿ ನಗರದಲ್ಲಿರುವ ಪಾಲಿಕೆ ಎಇ ಗೋವಿಂದಯ್ಯ ಮತ್ತು ಎಫ್‌ಡಿಎ ವೆಂಕಟೇಶ್ ಅವರ ನಿವಾಸದ ಮೇಲೆ ದಾಳಿ ಮಾಡಿ, ಹಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಲಾರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ಮೂರು ಕಡೆ ದಾಳಿ ನಡೆಸಿದ್ದು, ತಾಲೂಕ ಇಒ ಸಂಜಪ್ಪ, ಲೆಕ್ಕ ಪರಿಶೋಧಕ ಮುನಿವೆಂಕಟಪ್ಪ, ಮುಳಬಾಗಿಲು ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಶ್ರೀಧರ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಗ್ರಾಮ ಪಂಚಾಯಿತಿ ಕಾಮಗಾರಿಗಳಲ್ಲಿ ಅವ್ಯಹಾರ ನಡೆದಿದೆ ಆರೋಪದ ಮೇಲೆ ದಾವಣಗೆರೆ ಜಿಲ್ಲೆಯ ಜಗಳೂರಿನ ಗ್ರಾಮ ಪಂಚಾಯತಿ ಕಾರ್ಯದರ್ಶಿಯವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಆರ್‌ಟಿಐ ಇನ್ಸ್‌ಪೆಕ್ಟರ್ ಸಜೀರ್ ಅಹ್ಮದ್ ಸೇರಿದಂತೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆದಿದೆ. ಇನ್ನು ಚಿಕ್ಕಮಗಳೂರಿನಲ್ಲೂ ಭ್ರಷ್ಟ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement