ರೆಡ್ಡಿ ಆಪ್ತ ಅಲಿಖಾನ್ಗಿಲ್ಲ ಮಧ್ಯಂತರ ಜಾಮೀನು
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ..
ಹೈದರಾಬಾದ್: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ಗೆ ಮಧ್ಯಂತರ ಜಾಮೀನು ನೀಡಲು ಸಿಬಿಐ ಕೋರ್ಟ್ ನಿರಾಕರಿಸಿದೆ.
ತಮ್ಮ ತಂದೆಯ ನಿವೃತ್ತಿ ಹಿನ್ನೆಲೆಯಲ್ಲಿ ನಡೆಯುವ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಲು ಮೇ 28ರಿಂದ ಜೂನ್ 2ರವರೆಗೆ ಮಧ್ಯಂತರ ಜಾಮೀನು ನೀಡುವಂತೆ ನಾಂಪಲ್ಲಿ ಸಿಬಿಐ ಕೋರ್ಟ್ಗೆ ಅಲಿಖಾನ್ ಮನವಿ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಅಲಿಖಾನ್ಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.