ಸ್ಪಾಟ್ ಫಿಕ್ಸಿಂಗ್: ಪೊಲೀಸರಿಂದ ಗುರುನಾಥ್ ವಿಚಾರಣೆ
ಐಪಿಎಲ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರ ಅಳಿಯ ಗುರುನಾಥ್...
ಮುಂಬೈ: ಐಪಿಎಲ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರ ಅಳಿಯ ಗುರುನಾಥ್ ಮೇಯಪ್ಪನ್ ಅವರನ್ನು ಶುಕ್ರವಾರ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಗುರುನಾಥ್ ಭಾಗಿಯಾಗಿದ್ದಾರೆ ಎಂದು ನಟ ವಿಂದೂ ದಾರಾಸಿಂಗ್ ಹೇಳಿಕೆ ಹಿನ್ನಲೆಯಲ್ಲಿ ಕ್ರೈಂ ಬ್ರಾಂಚ್ ಮುಂದೆ ಹಾಜರಾಗುವಂತೆ ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಆ ಸಂಬಂಧ ಇಂದು ಮುಂಬೈಗೆ ತೆರಳಿದ ಗುರುನಾಥ್‌ರನ್ನು ಅಂತರಾಷ್ಟ್ರೀಯಾ ವಿಮಾನ ನಿಲ್ದಾಣದಲ್ಲಿ ಕ್ರೈಂ ಬ್ರಾಂಚ್ ಅಧಿಕಾರಿಗಳು ವಿಚಾರಣೆಗಾಗಿ ಕ್ರೈಂ ಬ್ರಾಂಚ್ ಪ್ರಧಾನ ಕಚೇರಿಗೆ ಕರೆದೊಯ್ದಿದ್ದಾರೆ.
ಮುಂಬೈ ಕ್ರೈಂ ಬ್ರಾಂಚ್ ಮುಂದೆ ಹಾಜರಾಗಲು ಗುರುನಾಥ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ, ವಿಮಾನ ನಿಲ್ದಾಣದಲ್ಲಿ ಮೊದಲೇ ಮೊಕ್ಕಾಂ ಹೂಡಿದ್ದ ಆಧಿಕಾರಿಗಳು ಆತನನ್ನು ಕಚೇರಿಗೆ ಕರೆದೊಯ್ದು ವಿಚಾರಣೆಗೊಳಪಡಿಸಲಿದ್ದಾರೆ.
ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್ ಅವರ ಪುತ್ರ ಅಶ್ವಿನ್ ಅವರು, ಗುರುನಾಥ್‌ಗೆ ಬುಕ್ಕಿಗಳೊಂದಿಗೆ ಸಂಪರ್ಕವಿತ್ತು ಎಂದು ಆರೋಪಿಸಿದ್ದಾರೆ. ಇದರಿಂದ ಗುರುನಾಥ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬುದಕ್ಕೆ ಆಧಾರ ಸಿಕ್ಕಿದ್ದತಾಂಗಿದ್ದು, ಅಶ್ವಿನ್ ಅವರ ಹೇಳಿಕೆಯಿಂದ ಪ್ರಕರಣಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಿದಂತಾಗಿದೆ.
ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಬಂಧಿತ ಆರೋಪಿ ನಟ ವಿಂದೂ ದಾರಾಸಿಂಗ್ ಹೇಳಿಕೆ ಹಿನ್ನಲೆಯಲ್ಲಿ ಮುಂಬೈ ಪೊಲೀಸರ ತಂಡ ಗುರುವಾರ ಚೆನ್ನೈನ ಗುರುನಾಥ್ ನಿವಾಸಕ್ಕೆ ಬಂದಿದ್ದರು. ಆ ಸಂದರ್ಭದಲ್ಲಿ ಗುರುನಾಥ್ ಅವರು ತಮ್ಮ ನಿವಾಸದಲ್ಲಿರದಿದ್ದ ಕಾರಣ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು.
ಶುಕ್ರವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯೊಳಗಾಗಿ ಕ್ರೈಂ ಬ್ರಾಂಚ್‌ಗೆ ಬಂದು ಶರಣಾಗುವಂತೆ ಕಾಲಾವಕಾಶ ನೀಡಿದ್ದರಿಂದ ಗುರುನಾಥ್ ಇಂದು ಮುಂಬೈನ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಂತೆ ಕ್ರೈಂ ಬ್ರಾಂಚ್ ಅಧಿಕಾರಿಗಳು ಆತನನ್ನು ವಿಚಾರಣೆಗೊಳಪಡಿಸಲಿದ್ದಾರೆ.