ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

'ಫಿಕ್ಸಿಂಗ್ ಗುರು' ತನಿಖೆಗೆ ಸಹಕರಿಸುತ್ತಿಲ್ಲ: ಪೊಲೀಸ್

ಐಪಿಎಲ್ ಬೆಟ್ಟಿಂಗ್ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ್ ಹಾಗೂ ಬಿಸಿಸಿಐ..

Lingaraj Badiger
Updated On : 25 May 2013, 12:37 pm

ಮುಂಬೈ: ಐಪಿಎಲ್ ಬೆಟ್ಟಿಂಗ್ ಹಗರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ್ ಹಾಗೂ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರು ಅಳಿಯ ಗುರುನಾಥ್ ಮೇಯಪ್ಪನ್ ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಶನಿವಾರ ಪೊಲೀಸರು ಹೇಳಿದ್ದಾರೆ.

ನಿನ್ನೆ ರಾತ್ರಿ ಗುರುನಾಥ್ ಅವರನ್ನು ವಶಕ್ಕೆ ಪಡೆದಿರುವ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ವಿಚಾರಣೆಗೆ ಸಹಕಾರ ನೀಡದೇ, ನಮ್ಮ ಪ್ರಶ್ನೆಗಳಿಗೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎಂದು ಪೊಲೀಸರು ದೂರಿದ್ದಾರೆ.

ತಮಿಳುನಾಡಿನ ಮಧುರೆಯಿಂದ ನಿನ್ನೆ ರಾತ್ರಿ 8 ಗಂಟೆ ವೇಳೆಗೆ ಮುಂಬೈ ಪೊಲೀಸರ ಮುಂದೆ ಹಾಜರಾಗಿದ್ದ ಗುರುನಾಥ್ ಅವರನ್ನು ಪೊಲೀಸರು ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದರು. ಆದರೆ ಪೊಲೀಸರ ಪ್ರಶ್ನೆಗೆ ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ತಡ ರಾತ್ರಿ ಬಂಧಿಸಲಾಗಿತ್ತು.

ಬಂಧನದ ನಂತರ ಗುರುನಾಥ್ ಅವರನ್ನು ಪೊಲೀಸರು ಹಲವು ಬಾರಿ ವಿಚಾರಣೆಗೆ ಒಳಪಡಿಸಿದ್ದು, ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಪರಿಚಯವಿದೆ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗುರುನಾಥ್ ಅವರನ್ನು ಇಂದು ಮಧ್ಯಾಹ್ನ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಹಾಜರುಪಡಿಸಲಾಗುತ್ತಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಕೋರುವ ಸಾಧ್ಯತೆ ಇದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement